LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

KPSC ಹಗರಣ CBI ತನಿಖೆಗೆ ಆಗ್ರಹಿಸಿ ಆ.5 ರಿಂದ ABVP ಅನಿರ್ದಿಷ್ಟಾವಧಿ ಧರಣಿ

Advertisement
Advertisement

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಹಗರಣವನ್ನ ಕೇಂದ್ರ ತನಿಖಾ ದಳ ಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಆಗಸ್ಟ್‌ 5 ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸುವುದಾಗಿ ಘೋಷಿಸಿದೆ.

ABVP ನೀಡಿದ್ದ ಗಡುವಿನೊಳಗೆ ರಾಜ್ಯ ಸರ್ಕಾರದಿಂದ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ಅಥವಾ CBI ತನಿಖೆಗೆ ಸಂಬಂಧಿಸಿದ ನಿರ್ಧಾರ ಪ್ರಕಟವಾಗದ ಹಿನ್ನೆಲೆಯಲ್ಲಿ ಈ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಬೆಂಗಳೂರು ನಗರ ವಿಭಾಗದ ಕಾರ್ಯದರ್ಶಿ ಅಭಿನಂದನ ಮಿರ್ಜಿ ತಿಳಿಸಿದ್ದಾರೆ.

KPSC ನಡೆಸಿದ 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ. ಜುಲೈ 17ರಂದು ಪ್ರಕಟಗೊಂಡ ಫಲಿತಾಂಶಕ್ಕೆ ಸಂಬಂಧಿಸಿದಂತೆ OMR ಉತ್ತರ ಪತ್ರಿಕೆಗಳನ್ನು ತಿದ್ದುಪಡಿ ಮಾಡಲಾಗಿದೆ ಹಾಗೂ ಒಂದು ಹುದ್ದೆಗೆ ಸುಮಾರು 80 ಲಕ್ಷ ರೂ.ವರೆಗೆ ಹಣದ ಬೇಡಿಕೆ ಇಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ ಎಂದು ಸಂಘಟನೆ ಹೇಳಿದೆ.

ಈ ಹಗರಣವನ್ನು ಖಂಡಿಸಿ ABVP ಈ ಹಿಂದೆ KPSC ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿತ್ತು. ಆ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹಲವು ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದರು. ಬಳಿಕ, ಪ್ರಕರಣವನ್ನು CBIಗೆ ವಹಿಸುವಂತೆ ಆಗ್ರಹಿಸಿ ABVP ಪತ್ರಿಕಾಗೋಷ್ಠಿ ನಡೆಸಿ ಸರ್ಕಾರಕ್ಕೆ ಆಗಸ್ಟ್‌ 4ರ ವರೆಗೆ ಗಡುವು ನೀಡಿತ್ತು. ಗಡುವು ಮುಗಿದರೂ ಸರ್ಕಾರದಿಂದ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ಆಗಸ್ಟ್‌ 5ರಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಘೋಷಿಸಿದೆ.

ರಾಜ್ಯದ ಲಕ್ಷಾಂತರ ಯುವಕರು ಸರ್ಕಾರಿ ಉದ್ಯೋಗಕ್ಕಾಗಿ ವರ್ಷಗಳ ಕಾಲ ಶ್ರಮಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಆರೋಪಗಳು ಅಭ್ಯರ್ಥಿಗಳ ವಿಶ್ವಾಸಕ್ಕೆ ಧಕ್ಕೆ ತಂದಿವೆ. ಹೀಗಾಗಿ ಪ್ರಕರಣದ ಬಗ್ಗೆ ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವ ಉದ್ದೇಶದಿಂದ CBIಗೆ ಪ್ರಕರಣವನ್ನು ವಹಿಸಬೇಕು ಎಂದು ABVP ಆಗ್ರಹಿಸಿದೆ.

ಈ ಕುರಿತು ಬೆಂಗಳೂರು ನಗರ ಕಾರ್ಯದರ್ಶಿ ಅಭಿನಂದನ ಮಿರ್ಜಿ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭವ್ಯ ತಿರಂಗಾ ರ್ಯಾಲಿ ದೇಶಭಕ್ತಿಯ ಸಂಭ್ರಮದೊಂದಿಗೆ ಯಶಸ್ವಿ3 ನಿಮಿಷದಲ್ಲಿ ಹನುಮಾನ್ ಚಾಲೀಸ ಪಠಣ – ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ 4 ವರ್ಷದ ಬಾಲಕ!ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು – ಆ.14 ರಂದು ವಿಧಾನಸೌಧದ ಮುಂದೆ ಪ್ರತಿಭಟನೆಗೆ ಸಿದ್ಧತೆಪರಪ್ಪನ ಅಗ್ರಹಾರದಲ್ಲಿ ಮೊಬೈಲ್‌ ಪತ್ತೆ ಪ್ರಕರಣ – 2ನೇ ಎಫ್‌ಐಆರ್‌ ದಾಖಲುಯಂತ್ರಕ್ಕೆ ಸಿಲುಕಿದ್ದ ಅಡುಗೆ ಸಿಬ್ಬಂದಿಯನ್ನು ರಕ್ಷಿಸಿದ ಬಾಲಕ – ಪುಟಾಣಿಯ ಸಾಹಸಕ್ಕೆ ಡಿಕೆಶಿ ಮೆಚ್ಚುಗೆಆ.15ರಂದು ವಿಧಾನಸೌಧದಲ್ಲಿ ಫ್ರೀಡಂ ಹಬ್ಬ – QR ಕೋಡ್ ಮೂಲಕ ಪೂರ್ವ ನೋಂದಣಿ ಕಡ್ಡಾಯಕೇಸ್‌ ಇತ್ಯರ್ಥಕ್ಕೆ ಲಂಚಕ್ಕೆ ಕೈಯೊಡ್ಡಿದ ಪಿಎಸ್‌ಐ ʻಲೋಕಾʼ ಬಲೆಗೆಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ನೇಣಿಗೆ ಕೊರಳೊಡ್ಡಿದ ಪ್ರಿಯಕರಸೋಷಿಯಲ್‌ ಮೀಡಿಯಾ ಮೂಲಕ ಪಾಕ್ ಜೊತೆ ಸಂಪರ್ಕ ಶಂಕೆ; ಇಬ್ಬರು ವಶಕ್ಕೆಹೈಕೋರ್ಟ್‌ನಲ್ಲೂ ದರ್ಶನ್‌ಗೆ ಹಿನ್ನಡೆ – ಮಾಫಿ ಸಾಕ್ಷಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿಲ್ಲ ಎಂದ ಕೋರ್ಟ್‌