LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ಅಧಿಕಾರಿಗಳ ನೇಮಕಾತಿ ಗೊಂದಲ – ಪ್ರತಿಭಟನಾ ನಿರತ ಜಿಕೆವಿಕೆ ವಿದ್ಯಾರ್ಥಿಗಳ ಸಮಸ್ಯೆ ಖುದ್ದು ಆಲಿಸಿದ ಡಿಕೆಶಿ

Advertisement
Advertisement

ಬೆಂಗಳೂರು: ಕೃಷಿ ಅಧಿಕಾರಿಗಳ ನೇಮಕಾತಿ ಗೊಂದಲಕ್ಕೆ ಸಂಬಂಧಪಟ್ಟಂತೆ ಪ್ರತಿಭಟನಾ ನಿರತ ಜಿಕೆವಿಕೆ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಖುದ್ದು ಆಲಿಸಿದ ಸಿಎಂ ಡಿಕೆ ಶಿವಕುಮಾರ್‌  ಅವರು ಕಾನೂನಾತ್ಮಕವಾಗಿ ಬಗೆಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.

14ನೇ ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ ಸ್ಥಳದ ಬಳಿ ತಮಗೆ ಮನವಿ ಸಲ್ಲಿಸಲು ಮಂಗಳವಾರ ಬಂದಿದ್ದ ಜಿಕೆವಿಕೆ (GKVK) ಕೃಷಿ ವಿ.ವಿ ವಿದ್ಯಾರ್ಥಿಗಳನ್ನು ಗಮನಿಸಿದ ಸಿಎಂ ಡಿ.ಕೆ ಶಿವಕುಮಾರ್ ಅವರು ವಿದ್ಯಾರ್ಥಿಗಳನ್ನು ಹತ್ತಿರ ಕರೆದು ಮಾತನಾಡಿದರು. ಅವರನ್ನು ಮರದ ನೆರಳಿಗೆ ಕರೆದುಕೊಂಡು ಹೋಗಿ ವಸ್ತುಸ್ಥಿತಿಯ ಬಗ್ಗೆ ಮಾಹಿತಿ ಪಡೆದು, ಯಾವ ಹಂತದಲ್ಲಿ ಸಮಸ್ಯೆ ಉಂಟಾಗಿದೆ ಎಂದು ಕೇಳಿದರು. 

ವಿದ್ಯಾರ್ಥಿಗಳ ಮಾತುಗಳನ್ನು ಆಲಿಸಿದ ನಂತರ ಪ್ರತಿಭಟನೆ ಕೈ ಬಿಡಿ. ನಮ್ಮ ಸರ್ಕಾರ ನಿರುದ್ಯೋಗ ನಿರ್ಮೂಲನೆಗೆ ಕ್ರಮ ತೆಗೆದುಕೊಂಡಿದೆ. ನಿಮಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುವುದು. ಈ ಹಿಂದಿನ ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ಮಾಡಲಾದ ನಿಯಮಗಳ ತಿದ್ದುಪಡಿಯಿಂದಾಗಿ ಕೃಷಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಕಾನೂನಾತ್ಮಕವಾಗಿ ಬಗೆಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಭರವಸೆ ನೀಡಿದರು.

ಇತ್ತೀಚೆಗಷ್ಟೇ ಸರ್ಕಾರವು 900ಕ್ಕೂ ಹೆಚ್ಚು ಕೃಷಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಈ ಹುದ್ದೆಗೆ ಬಿ.ಇ, ಬಿ.ಟೆಕ್‌ನಲ್ಲಿ ಬಯೋ ಕೆಮಿಸ್ಟ್ರಿ ಓದಿದ ಅಭ್ಯರ್ಥಿಗಳಿಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದನ್ನು ಸ್ಮರಿಸಬಹುದು. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭವ್ಯ ತಿರಂಗಾ ರ್ಯಾಲಿ ದೇಶಭಕ್ತಿಯ ಸಂಭ್ರಮದೊಂದಿಗೆ ಯಶಸ್ವಿ3 ನಿಮಿಷದಲ್ಲಿ ಹನುಮಾನ್ ಚಾಲೀಸ ಪಠಣ – ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ 4 ವರ್ಷದ ಬಾಲಕ!ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು – ಆ.14 ರಂದು ವಿಧಾನಸೌಧದ ಮುಂದೆ ಪ್ರತಿಭಟನೆಗೆ ಸಿದ್ಧತೆಪರಪ್ಪನ ಅಗ್ರಹಾರದಲ್ಲಿ ಮೊಬೈಲ್‌ ಪತ್ತೆ ಪ್ರಕರಣ – 2ನೇ ಎಫ್‌ಐಆರ್‌ ದಾಖಲುಯಂತ್ರಕ್ಕೆ ಸಿಲುಕಿದ್ದ ಅಡುಗೆ ಸಿಬ್ಬಂದಿಯನ್ನು ರಕ್ಷಿಸಿದ ಬಾಲಕ – ಪುಟಾಣಿಯ ಸಾಹಸಕ್ಕೆ ಡಿಕೆಶಿ ಮೆಚ್ಚುಗೆಆ.15ರಂದು ವಿಧಾನಸೌಧದಲ್ಲಿ ಫ್ರೀಡಂ ಹಬ್ಬ – QR ಕೋಡ್ ಮೂಲಕ ಪೂರ್ವ ನೋಂದಣಿ ಕಡ್ಡಾಯಕೇಸ್‌ ಇತ್ಯರ್ಥಕ್ಕೆ ಲಂಚಕ್ಕೆ ಕೈಯೊಡ್ಡಿದ ಪಿಎಸ್‌ಐ ʻಲೋಕಾʼ ಬಲೆಗೆಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ನೇಣಿಗೆ ಕೊರಳೊಡ್ಡಿದ ಪ್ರಿಯಕರಸೋಷಿಯಲ್‌ ಮೀಡಿಯಾ ಮೂಲಕ ಪಾಕ್ ಜೊತೆ ಸಂಪರ್ಕ ಶಂಕೆ; ಇಬ್ಬರು ವಶಕ್ಕೆಹೈಕೋರ್ಟ್‌ನಲ್ಲೂ ದರ್ಶನ್‌ಗೆ ಹಿನ್ನಡೆ – ಮಾಫಿ ಸಾಕ್ಷಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿಲ್ಲ ಎಂದ ಕೋರ್ಟ್‌