LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ರಕರ್ತರ ಸೋಗಿನಲ್ಲಿ ಸುಲಿಗೆ ಮಾಡ್ತಿದ್ದ ನಾಲ್ವರು ಯೂಟ್ಯೂಬರ್ಸ್ ಅರೆಸ್ಟ್

Advertisement
Advertisement

ಚಿಕ್ಕೋಡಿ: ಪತ್ರಕರ್ತರ ಸೋಗಿನಲ್ಲಿ ಜನರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ನಾಲ್ವರು ಯೂಟ್ಯೂಬರ್‌ಗಳನ್ನು ಬೆಳಗಾವಿ  ಪೊಲೀಸರು ಬಂಧಿಸಿದ್ದಾರೆ.

ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಸುಲಿಗೆ ನಡೆಸುತ್ತಿದ್ದ ಈ ಗ್ಯಾಂಗ್‌ನ್ನು ಹುಕ್ಕೇರಿ ಪೊಲೀಸರು ಪತ್ತೆಹಚ್ಚಿ ಜೈಲಿಗಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಕೊಟಬಾಗಿ ಗ್ರಾಮದ ಮೆಹಬೂಬ್ ಜಮಾದಾರ್ ಅವರನ್ನು ಟಾರ್ಗೆಟ್ ಮಾಡಿಕೊಂಡು ಆರೋಪಿಗಳು ಮೊದಲೇ ಗಾಂಜಾ ಪ್ಯಾಕೆಟ್ ನೀಡಿದ್ದಾರೆ. ಬಳಿಕ ಪೊಲೀಸರ ಹೆಸರಿನಲ್ಲಿ ಬೆನ್ನಟ್ಟಿಕೊಂಡು ಬಂದು, ಗಾಂಜಾ ಮಾರಾಟ ಮಾಡುತ್ತಿದ್ದೀಯಾ ಎಂದು ಬೆದರಿಕೆ ಹಾಕಿದ್ದಾರೆ.

ಗಾಂಜಾ ಪ್ಯಾಕೆಟ್ ನೀಡಿದ್ದನ್ನು ತಾವೇ ವಿಡಿಯೋ ಮಾಡಿ, ಹಣ ಕೊಟ್ಟರೆ ಕೇಸ್ ಹಾಕುವುದಿಲ್ಲ ಎಂದು ಬೆದರಿಸಿದ್ದಾರೆ. ಮೊದಲಿಗೆ 3 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳು, ಕೊನೆಗೆ ಮೆಹಬೂಬ್ ಬಳಿ ಇದ್ದ 60 ಸಾವಿರ ಹಣವನ್ನು ವಸೂಲಿ ಮಾಡಿದ್ದಾರೆ. ಅಷ್ಟೇ ಅಲ್ಲ, ಕೇಳಿದಷ್ಟು ಹಣ ಕೊಟ್ಟಿಲ್ಲವೆಂದು ಮೆಹಬೂಬ್‌ನ ವಿಡಿಯೋವನ್ನು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಿದ್ದಾರೆ.

ವಿಡಿಯೋ ವೈರಲ್ ಆದ ಬಳಿಕ ಮೆಹಬೂಬ್ ಹುಕ್ಕೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಯೂಟ್ಯೂಬ್ ಮುಖವಾಡದಲ್ಲಿ ಸುಲಿಗೆ ಮಾಡುತ್ತಿದ್ದ ಜಾಲವನ್ನು ಬಯಲಿಗೆಳೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲಪ್ಪ ಮಾಳಾಜ್, ಮಲ್ಲಿಕಾರ್ಜುನ ಜುಲಫಿ, ಪೃಥ್ವಿರಾಜ್ ಚೌಹಾಣ್ ಹಾಗೂ ಡೇವಿಡ್ ತಂಗೇರಾಳ ಎಂಬ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಕಾರು, ಮೊಬೈಲ್ ಫೋನ್‌ಗಳು ಹಾಗೂ ನಗದು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅರಣ್ಯ ಇಲಾಖೆಯಿಂದ ಶಾಕ್ – ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ ರೇಟ್ ಡಬಲ್ರಾಜೀನಾಮೆ ಬಳಿಕ ಸಂಸತ್‌ ಭವನಕ್ಕೆ ಬಂದ ಧರ್ಮೇಂದ್ರ ಪ್ರಧಾನ್‌ಗೆ ಪೇಟ ತೊಡಿಸಿ ಅದ್ಧೂರಿ ಸ್ವಾಗತವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK-47 ಹಿಡಿದು ಗುಂಡು ಹಾರಿಸಿದ ಕಾನ್ಸ್‌ಟೇಬಲ್‌ – ವಿಡಿಯೋ ವೈರಲ್‌ ಬೆನ್ನಲ್ಲೇ ಅಮಾನತುಕುಡಿಯುವ ನೀರಿಗಾಗಿ 224 ಕೋಟಿ ಅನುದಾನ ಬಿಡುಗಡೆ – ಈಶ್ವರ್ ಖಂಡ್ರೆಗದ್ದಲ ಕೋಲಾಹಲದ ನಡುವೆ ಲೋಕಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ ಮಂಡನೆ5,000 ರೂ. ಲಂಚ ಪಡೆದ ಆರೋಪ – ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯಪತ್ರಕರ್ತರ ಸೋಗಿನಲ್ಲಿ ಸುಲಿಗೆ ಮಾಡ್ತಿದ್ದ ನಾಲ್ವರು ಯೂಟ್ಯೂಬರ್ಸ್ ಅರೆಸ್ಟ್ಧುಮ್ಮಿಕ್ಕುತ್ತಿರುವ ʻಜೋಗದ ಸಿರಿʼಯನ್ನು ಕಣ್ತುಂಬಿಕೊಂಡ ಸಾವಿರಾರು ಪ್ರವಾಸಿಗರುನಿಪ್ಪಾಣಿಯಲ್ಲಿ ಆಲ್ ಇಂಡಿಯಾ ಪ್ಯಾಂಥರ್ ಸೇನೆಯಿಂದ ಗಮನ ಸೆಳೆಯುವ ಧರಣಿ; NEET ಪ್ರಕರಣದ ವಿವಿಧ ಬೇಡಿಕೆಗಳ ಕುರಿತು ತಹಶೀಲ್ದಾರರಿಗೆ ಮನವಿ