LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ರಾಹುಲ್‌ವಾದಿಯಲ್ಲ, ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲ್ಲ: ಮಣಿಶಂಕರ್‌ ಅಯ್ಯರ್‌

Advertisement
Advertisement
ತಿರುವಂತಪುರಂ: ಮುಂಬರುವ ಕೇರಳ ಚುನಾವಣೆಯಲ್ಲಿ  ಕಾಂಗ್ರೆಸ್ ಗೆಲ್ಲುವುದಿಲ್ಲ. ಕಮ್ಯುನಿಸ್ಟ್ ವಿರೋಧಕ್ಕಿಂತ ಪಕ್ಷದೊಳಗಿನ ನಾಯಕರ ನಡುವೆಯೇ ಪರಸ್ಪರ ವಿರೋಧ, ಭಿನ್ನಾಭಿಪ್ರಾಯ ಇದೆ ಎಂದು ಕಾಂಗ್ರೆಸ್ಸಿಗ ಮಣಿಶಂಕರ್ ಅಯ್ಯರ್ ಬಾಂಬ್‌ ಸಿಡಿಸಿದ್ದಾರೆ.

ಮಾಧ್ಯಮಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ (Congress) ಗೆಲ್ಲಬೇಕೆಂದು ಬಯಸುತ್ತೇನೆ. ಆದರೆ ಕಾಂಗ್ರೆಸ್ ನಾಯಕರು ಪಕ್ಷದ ಒಳಗಡೆಯೇ ಕಚ್ಚಾಟ ನಡೆಸುತ್ತಿರುವುದರಿಂದ ಇದು ಸಾಧ್ಯವಾಗುತ್ತದೆ ಎಂದು ಹೇಳಲು ಬರುವುದಿಲ್ಲ. ಕಮ್ಯುನಿಸ್ಟರನ್ನು ದ್ವೇಷಿಸುವುದಕ್ಕಿಂತ ಹೆಚ್ಚಾಗಿ ಪರಸ್ಪರ ದ್ವೇಷಿಸುತ್ತಾರೆ ಎಂದು ತಿವಿದಿದ್ದಾರೆ.

ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೇನೆ, ಇನ್ನೂ ನಾನು ಪಕ್ಷವನ್ನು ತೊರೆದಿಲ್ಲ. ರಾಹುಲ್ ಗಾಂಧಿ  ನಾನು ಪಕ್ಷದ ಸದಸ್ಯ ಎಂಬುದನ್ನು ಮರೆತಿದ್ದಾರೆ. ಆದ್ದರಿಂದ ನಾನು ಗಾಂಧಿವಾದಿ, ನಾನು ನೆಹರೂವಾದಿ, ನಾನು ರಾಜೀವವಾದಿ, ಆದರೆ ನಾನು ರಾಹುಲ್‌ವಾದಿಯಲ್ಲ ಎಂದರು.

ತರೂರ್‌ ಅವರ ಬಗ್ಗೆ ಪ್ರತಿಕ್ರಿಯಿಸಿ, ಪಾಕಿಸ್ತಾನ ವಿರೋಧಿ ಮನಸ್ಥಿತಿಯನ್ನು ಹೊಂದಿರುವ ಶಶಿ ತರೂರ್‌ ಮುಂದಿನ ವಿದೇಶಾಂಗ ಸಚಿವನಾಗುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದಾರೆ ಎಂದು ಹೇಳಿದರು.

ಪವನ್‌ ಖೇರಾ ಅವರನ್ನು ಕೈಗೊಂಬೆ ಎಂದು ಬಣ್ಣಿಸಿದ ಅವರು ಕಳೆದ ಎರಡು ವರ್ಷಗಳಿಂದ ನನ್ನ ಮೇಲೆ ಖೇರಾ ಆರೋಪ ಮಾಡುತ್ತಲೇ ಬಂದಿದ್ದಾರೆ. ಅವರು ಪಕ್ಷದ ವಕ್ತಾರರಲ್ಲ. ಕಾಂಗ್ರೆಸ್ ಪಕ್ಷವು ಪವನ್ ಖೇರಾ ಹೊರತುಪಡಿಸಿ ಬೇರೆಯವರನ್ನು ತನ್ನ ವಕ್ತಾರರನ್ನಾಗಿ ಹುಡುಕಲು ಸಾಧ್ಯವಾಗದಿದ್ದರೆ ಅದು ಈಗಿರುವ ಸ್ಥಿತಿಯಲ್ಲೇ ಇರುತ್ತದೆ ಎಂದು ಹೇಳಿದರು.

ಮಣಿಶಂಕರ್‌ ಅಯ್ಯರ್‌ ಹೇಳಿಕೆ ಪ್ರಕಟವಾದ ಬೆನ್ನಲ್ಲೇ ಕಾಂಗ್ರೆಸ್‌ ಪ್ರತಿಕ್ರಿಯಿಸಿದೆ. ಮಣಿಶಂಕರ್ ಅಯ್ಯರ್ ಕಳೆದ ಕೆಲವು ವರ್ಷಗಳಿಂದ ಕಾಂಗ್ರೆಸ್ ಜೊತೆ ಯಾವುದೇ ಸಂಬಂಧ ಹೊಂದಿಲ್ಲ. ಅವರು ಸಂಪೂರ್ಣವಾಗಿ ತಮ್ಮ ವೈಯಕ್ತಿಕ ಸಾಮರ್ಥ್ಯದಲ್ಲಿ ಮಾತನಾಡುತ್ತಾರೆ ಎಂದು ಪವನ್‌ ಖೇರಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಆದಾಯ ಪ್ರಮಾಣಪತ್ರ ಸಲ್ಲಿಕೆ – KPSC ಅಧ್ಯಕ್ಷರ ಪುತ್ರಿ ವಿರುದ್ಧ ಎಫ್‌ಐಆರ್ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ಆರೋಪ – ಕಾಸು ಕೊಟ್ರೆ ತಪಾಸಣೆಯೆ ಇಲ್ವಂತೆ!ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್‌ – ಗುಂಡು ಹಾರಿಸಿಕೊಂಡು ಕೊಡಗಿನ ಯುವಕ ಆತ್ಮಹತ್ಯೆಶಾಶ್ವತ ನಿವಾಸ ಪ್ರಮಾಣಪತ್ರ ರಾಜ್ಯ ಸರ್ಕಾರ ಯಾಕೆ ಕೊಡಬಾರದು – ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆತನ್ನ ಪರ ತೀರ್ಪು ಕೊಡಲಿ ಅಂತ ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಾಟಮಂತ್ರ – ಮಹಿಳೆ ಬಂಧನಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಇರ್ಫಾನ್ ಅರೆಸ್ಟ್‌ಬೆಂಗಳೂರಿನಲ್ಲಿ ಮತ್ತೆ ತ್ರಿವಳಿ ಕೊಲೆ – ತಾಯಿ, ಅಜ್ಜಿ, ಮಾವನನ್ನು ಕೊಂದು ಪರಾರಿಯಾಗಬೇಕಿದ್ದವ ಸೂಸೈಡ್‌ಪ್ರಶಾಂತ್ ಕಿಶೋರ್ ವಿರುದ್ಧ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಯನ್ನು ಬಿಜೆಪಿ ದಿಢೀರ್‌ ಬದಲಾಯಿಸಿದ್ದು ಯಾಕೆ?ತೆಲಂಗಾಣದಲ್ಲಿ ಪೋಕ್ಸೋ ಆರೋಪಿಯಿಂದ ಮಾರಣಹೋಮ – ಪತ್ನಿ, ಮಕ್ಕಳು, ಸಂತ್ರಸ್ತೆ ಸೇರಿ 6 ಜನರ ಬರ್ಬರ ಹತ್ಯೆಮಹಾರಾಷ್ಟ್ರದಲ್ಲಿ ತಗ್ಗಿದ ಮಳೆ – ಚಿಕ್ಕೋಡಿ ವ್ಯಾಪ್ತಿಯ 3 ಪ್ರಮುಖ ಸೇತುವೆಗಳು ಸಂಚಾರಕ್ಕೆ ಮುಕ್ತ