LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆರ್‌ಸಿಬಿ ಬೌಲರ್‌ಗಳ ಮುಂದೆ ಲಕ್ನೋ ಪಲ್ಟಿ

Advertisement
Advertisement
ಬೆಂಗಳೂರು: ಈ ಐಪಿಎಲ್‌ನಲ್ಲಿ ಇಲ್ಲಿಯವರೆಗೆ ಬ್ಯಾಟರ್‌ಗಳು ಅಬ್ಬರಿಸುತ್ತಿದ್ದರು. ಆದರೆ ಇಂದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಬೌಲರ್‌ಗಳು ಅಬ್ಬರಿಸಿದ್ದಾರೆ. ಆರ್‌ಸಿಬಿ ಬೌಲರ್‌ಗಳ ಉತ್ತಮ ಬೌಲಿಂಗ್‌ ಪ್ರದರ್ಶನದಿಂದ ಲಕ್ನೋ ಸೂಪರ್‌ ಜೈಂಟ್ಸ್‌ (LSG) ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಲಕ್ನೋ 20 ಓವರ್‌ಗಳಲ್ಲಿ 146 ರನ್‌ಗಳಿಗೆ ಆಲೌಟ್‌ ಆಯ್ತು. ಸುಲಭದ ಸವಾಲನ್ನು ಬೆನ್ನಟ್ಟಿದ ಆರ್‌ಸಿಬಿ ಇನ್ನೂ 29 ಎಸೆತ ಬಾಕಿ ಇರುವಂತೆಯೇ 5 ವಿಕೆಟ್‌ ನಷ್ಟಕ್ಕೆ 149 ರನ್‌ ಹೊಡೆದು ವಿಜಯ ಸಾಧಿಸಿತು. ಈ ಜಯದೊಂದಿಗೆ 1.503 ನೆಟ್‌ ರನ್‌ರೇಟ್‌ನೊಂದಿಗೆ ಆರ್‌ಸಿಬಿ 3ನೇ ಸ್ಥಾನದಿಂದ ಮೊದಲ ಸ್ಥಾನಕ್ಕೆ ಜಿಗಿದರೆ ಲಕ್ನೋ 7ನೇ ಸ್ಥಾನದಲ್ಲೇ ಮುಂದುವರಿದಿದೆ.

ಆರಂಭದಲ್ಲೇ ಫಿಲ್‌ ಸಾಲ್ಟ್‌ 7 ರನ್‌, ಪಡಿಕಲ್‌ 10 ರನ್‌ ಗಳಿಸಿ ಔಟಾದರೂ ಇಂಪ್ಯಾಕ್ಟ್‌ ಪ್ಲೇಯರ್‌ ಅಗಿ ಕಣಕ್ಕೆ ಇಳಿದ ಕೊಹ್ಲಿ ಇನ್ನಿಂಗ್ಸ್‌ ಕಟ್ಟತೊಡಗಿದರು. ಆದರೆ ಅರ್ಧಶತಕಕ್ಕೆ 1 ರನ್‌ ಬೇಕಿದ್ದಾಗ 49 ರನ್‌(34 ಎಸೆತ, 6 ಬೌಂಡರಿ, 1 ಸಿಕ್ಸ್‌) ಹೊಡೆದು ಕ್ಯಾಚ್‌ ನೀಡಿ ವಿಕೆಟ್‌ ಒಪ್ಪಿಸಿದರು.

ರಜತ್‌ ಪಾಟಿದಾರ್‌ 27 ರನ್‌(13 ಎಸೆತ, 1 ಬೌಂಡರಿ, 3 ಸಿಕ್ಸ್‌) ಹೊಡೆದರೆ ಜಿತೇಶ್‌ ಶರ್ಮಾ 23 ರನ್‌(9 ಎಸೆತ, 2 ಬೌಂಡರಿ, 2 ಸಿಕ್ಸ್‌) ಹೊಡೆದು ರನ್‌ ಹೆಚ್ಚಿಸಿದರು. ಕೊನೆಯಲ್ಲಿ ಟಿಮ್‌ ಡೇವಿಡ್‌ ಔಟಾಗದೇ 14 ರನ್‌(8 ಎಸೆತ, 1 ಬೌಂಡರಿ, 1 ಸಿಕ್ಸ್)‌, ರೊಮಾರಿಯೋ ಶೆಪಾರ್ಡ್‌ ಔಟಾಗದೇ 14 ರನ್‌(8 ಎಸೆತ, 1 ಬೌಂಡರಿ, 1 ಸಿಕ್ಸ್) ಹೊಡೆದು ಪಂದ್ಯವನ್ನು ಗೆಲ್ಲಿಸಿಕೊಟ್ಟರು.





ಆರ್‌ಸಿಬಿ ಬೌಲರ್‌ಗಳು ಅಕ್ಷರಶ: ಲಕ್ನೋ ಬ್ಯಾಟರ್‌ಗಳ ಮೇಲೆ ಸವಾರಿ ಮಾಡಿದ್ದರು. ಮಿಚೆಲ್‌ ಮಾರ್ಶ್‌ 40 ರನ್‌(32 ಎಸೆತ,3 ಬೌಂಡರಿ, 2 ಸಿಕ್ಸ್‌) , ಅಯುಶ್‌ ಬದೋನಿ 38 ರನ್‌(24 ಎಸೆತ, 4 ಬೌಂಡರಿ, 1 ಸಿಕ್ಸ್‌), ಮುಕುಲ್‌ ಚೌಧರಿ 39 ರನ್‌(28 ಎಸೆತ,3 ಬೌಂಡರಿ, 2 ಸಿಕ್ಸ್)‌ ಹೊಡೆದು ಸ್ವಲ್ಪ ಪ್ರತಿರೋಧ ತೋರಿದರು.

ರಾಸಿಖ್ ದಾರ್ 24 ರನ್‌ ನೀಡಿ 4 ವಿಕೆಟ್‌ ಕಿತ್ತರೆ, ಭುವನೇಶ್ವರ್ ಕುಮಾರ್ 27 ರನ್‌ ನೀಡಿ 3 ವಿಕೆಟ್ ಪಡೆದರು. ಕೃನಾಲ್‌ ಪಾಂಡ್ಯ 2 ವಿಕೆಟ್‌, ಜೋಶ್ ಹ್ಯಾಜಲ್‌ವುಡ್ 1 ವಿಕೆಟ್‌ ಪಡೆದರು. 71 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡು ಉತ್ತಮ ಸ್ಥಿತಿಯಲ್ಲಿದ್ದ ಲಕ್ನೋ ನಂತರದ 75 ರನ್‌ಗಳಿಸುವಷ್ಟರಲ್ಲಿ 8 ವಿಕೆಟ್‌ ಕಳೆದಕೊಂಡಿದ್ದು ಆರ್‌ಸಿಬಿ ಗೆಲುವಿಗೆ ಕಾರಣವಾಯಿತು.


 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭವ್ಯ ತಿರಂಗಾ ರ್ಯಾಲಿ ದೇಶಭಕ್ತಿಯ ಸಂಭ್ರಮದೊಂದಿಗೆ ಯಶಸ್ವಿ3 ನಿಮಿಷದಲ್ಲಿ ಹನುಮಾನ್ ಚಾಲೀಸ ಪಠಣ – ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ 4 ವರ್ಷದ ಬಾಲಕ!ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು – ಆ.14 ರಂದು ವಿಧಾನಸೌಧದ ಮುಂದೆ ಪ್ರತಿಭಟನೆಗೆ ಸಿದ್ಧತೆಪರಪ್ಪನ ಅಗ್ರಹಾರದಲ್ಲಿ ಮೊಬೈಲ್‌ ಪತ್ತೆ ಪ್ರಕರಣ – 2ನೇ ಎಫ್‌ಐಆರ್‌ ದಾಖಲುಯಂತ್ರಕ್ಕೆ ಸಿಲುಕಿದ್ದ ಅಡುಗೆ ಸಿಬ್ಬಂದಿಯನ್ನು ರಕ್ಷಿಸಿದ ಬಾಲಕ – ಪುಟಾಣಿಯ ಸಾಹಸಕ್ಕೆ ಡಿಕೆಶಿ ಮೆಚ್ಚುಗೆಆ.15ರಂದು ವಿಧಾನಸೌಧದಲ್ಲಿ ಫ್ರೀಡಂ ಹಬ್ಬ – QR ಕೋಡ್ ಮೂಲಕ ಪೂರ್ವ ನೋಂದಣಿ ಕಡ್ಡಾಯಕೇಸ್‌ ಇತ್ಯರ್ಥಕ್ಕೆ ಲಂಚಕ್ಕೆ ಕೈಯೊಡ್ಡಿದ ಪಿಎಸ್‌ಐ ʻಲೋಕಾʼ ಬಲೆಗೆಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ನೇಣಿಗೆ ಕೊರಳೊಡ್ಡಿದ ಪ್ರಿಯಕರಸೋಷಿಯಲ್‌ ಮೀಡಿಯಾ ಮೂಲಕ ಪಾಕ್ ಜೊತೆ ಸಂಪರ್ಕ ಶಂಕೆ; ಇಬ್ಬರು ವಶಕ್ಕೆಹೈಕೋರ್ಟ್‌ನಲ್ಲೂ ದರ್ಶನ್‌ಗೆ ಹಿನ್ನಡೆ – ಮಾಫಿ ಸಾಕ್ಷಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿಲ್ಲ ಎಂದ ಕೋರ್ಟ್‌