LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತನ್ನ ಪರ ತೀರ್ಪು ಕೊಡಲಿ ಅಂತ ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಾಟಮಂತ್ರ – ಮಹಿಳೆ ಬಂಧನ

Advertisement
Advertisement

ಚಿಕ್ಕಬಳ್ಳಾಪುರ: ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಹಿಳೆಯೊಬ್ಬರು ಮಾಟಮಂತ್ರ ಮಾಡಿರುವ ಅಚ್ಚರಿಯ ಘಟನೆ ಚಿಕ್ಕಬಳ್ಳಾಪುರ  ನ್ಯಾಯಾಲಯದಲ್ಲಿ ನಡೆದಿದೆ.

ಸಿವಿಲ್ ವ್ಯಾಜ್ಯದಲ್ಲಿ ತನ್ನ ಪರ ಅನುಕೂಲಕರ ತೀರ್ಪು ಪಡೆಯುವ ಉದ್ದೇಶದಿಂದ ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಾಟಮಂತ್ರ ಮಾಡಿದ್ದ ಚಿಕ್ಕಬಳ್ಳಾಪುರ ನಗರ ಪೊಲೀಸರು ಮಂಜುಳಾ (65) ಎಂಬಾಕೆಯನ್ನ ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ ನಗರದ ವಲಸಣ್ಣ ಬೀದಿ ನಿವಾಸಿಯಾಗಿರುವ ಮಂಜುಳಾ, 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ (JMFC Court) ನ್ಯಾಯಾಧೀಶರ ಡಯಾಸ್ ಚೇರ್ ಮೇಲೆ ಮಂತ್ರಿಸಿದ ಬಿಳಿ ಸಾಸಿವೆ ಚೆಲ್ಲಿ ಮಾಟಮಂತ್ರ ಮಾಡಿದ್ದರು. ಈ ಕೃತ್ಯ ಎರಡು ದಿನಗಳ ಹಿಂದೆ ನಡೆದಿದ್ದು, ನ್ಯಾಯಾಲಯದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಘಟನೆ ಸಂಬಂಧ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ನೇತ್ರಾ ನೀಡಿದ ದೂರಿನ ಮೇರೆಗೆ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದು. ಮಂಜುಳಾ ವಿರುದ್ಧ ಕರ್ನಾಟಕ ಅಮಾನವೀಯ ದುಷ್ಟಪದ್ದತಿ ಹಾಗೂ ವಾಮಾಚಾರ ಪ್ರತಿಬಂಧಕ ಮತ್ತು ನಿರ್ಮೂಲನಾ ಅಧಿನಿಯಮ–2017ರಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಬಂಧಿತ ಮಂಜುಳಾಳನ್ನ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನ್ಯಾಯಾಲಯದ ಆವರಣದಲ್ಲೇ ನಡೆದ ಈ ಘಟನೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಮೂಢನಂಬಿಕೆ ಮೂಲಕ ನ್ಯಾಯಾಂಗದ ಮೇಲೆ ಪ್ರಭಾವ ಬೀರುವ ಪ್ರಯತ್ನದ ಆರೋಪ ಇದೀಗ ಕಾನೂನು ಕ್ರಮಕ್ಕೆ ಕಾರಣವಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭವ್ಯ ತಿರಂಗಾ ರ್ಯಾಲಿ ದೇಶಭಕ್ತಿಯ ಸಂಭ್ರಮದೊಂದಿಗೆ ಯಶಸ್ವಿ3 ನಿಮಿಷದಲ್ಲಿ ಹನುಮಾನ್ ಚಾಲೀಸ ಪಠಣ – ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ 4 ವರ್ಷದ ಬಾಲಕ!ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು – ಆ.14 ರಂದು ವಿಧಾನಸೌಧದ ಮುಂದೆ ಪ್ರತಿಭಟನೆಗೆ ಸಿದ್ಧತೆಪರಪ್ಪನ ಅಗ್ರಹಾರದಲ್ಲಿ ಮೊಬೈಲ್‌ ಪತ್ತೆ ಪ್ರಕರಣ – 2ನೇ ಎಫ್‌ಐಆರ್‌ ದಾಖಲುಯಂತ್ರಕ್ಕೆ ಸಿಲುಕಿದ್ದ ಅಡುಗೆ ಸಿಬ್ಬಂದಿಯನ್ನು ರಕ್ಷಿಸಿದ ಬಾಲಕ – ಪುಟಾಣಿಯ ಸಾಹಸಕ್ಕೆ ಡಿಕೆಶಿ ಮೆಚ್ಚುಗೆಆ.15ರಂದು ವಿಧಾನಸೌಧದಲ್ಲಿ ಫ್ರೀಡಂ ಹಬ್ಬ – QR ಕೋಡ್ ಮೂಲಕ ಪೂರ್ವ ನೋಂದಣಿ ಕಡ್ಡಾಯಕೇಸ್‌ ಇತ್ಯರ್ಥಕ್ಕೆ ಲಂಚಕ್ಕೆ ಕೈಯೊಡ್ಡಿದ ಪಿಎಸ್‌ಐ ʻಲೋಕಾʼ ಬಲೆಗೆಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ನೇಣಿಗೆ ಕೊರಳೊಡ್ಡಿದ ಪ್ರಿಯಕರಸೋಷಿಯಲ್‌ ಮೀಡಿಯಾ ಮೂಲಕ ಪಾಕ್ ಜೊತೆ ಸಂಪರ್ಕ ಶಂಕೆ; ಇಬ್ಬರು ವಶಕ್ಕೆಹೈಕೋರ್ಟ್‌ನಲ್ಲೂ ದರ್ಶನ್‌ಗೆ ಹಿನ್ನಡೆ – ಮಾಫಿ ಸಾಕ್ಷಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿಲ್ಲ ಎಂದ ಕೋರ್ಟ್‌