LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಸಭಾ ಚುನಾವಣೆ – ನಾಮಪತ್ರ ಸಲ್ಲಿಸಿದ ಖರ್ಗೆ

Advertisement
Advertisement

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಅಧಿಕೃತವಾಗಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.

ವಿಧಾನಸೌಧದಲ್ಲಿರುವ ಚುನಾವಣಾ ಅಧಿಕಾರಿಯ ಕಚೇರಿಗೆ ತೆರಳಿದ ಅವರು, ಮುಂಬರುವ ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ದಾಖಲೆಗಳನ್ನು ಹಸ್ತಾಂತರಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಸುವ ವೇಳೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್‌ ಉಪಸ್ಥಿತರಿದ್ದರು. 

ನಾಮಪತ್ರ ಸಲ್ಲಿಕೆಯ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನಾನು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ನಮ್ಮ ಶಾಸಕರು, ನಮ್ಮ ನಾಯಕರು ನನ್ನನ್ನ ಆಯ್ಕೆ ಮಾಡಿದ್ದಾರೆ. ಜೂನ್ 18 ಚುನಾವಣೆಯಲ್ಲಿ ಎಲ್ಲರು ಒಗ್ಗಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನ ಗೆಲ್ಲಿಸ್ತಾರೆ. ನಿಮ್ಮೆಲ್ಲರ ಬೆಂಬಲ ಬೇಕು ಎಂದು ತಿಳಿಸಿದರು.

ಈ ವೇಳೆ ಮಾಧ್ಯಮಗಳು ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೇಳಿದ ಪ್ರಶ್ನೆಗೆ ಯಾವುದೇ ಉತ್ತರ ನೀಡದೇ ತೆರಳಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ – ಯುವಸಮೂಹಕ್ಕೆ ಅತಿದೊಡ್ಡ ಗೆಲುವು, ಮಂಡಿಯೂರಿದ ಕೇಂದ್ರ ನೀರಿಗಾಗಿ ಹಾಹಾಕಾರ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪ್ರಾರಂಭಬರ ಸಂಕಷ್ಟದಲ್ಲಿ ರೈತರಿಗೆ ಸಾಲಮನ್ನಾ ಸೇರಿ ತುರ್ತು ಪರಿಹಾರ ಘೋಷಿಸಲಿ: ಡಾ. ವೀರಣ್ಣ ಚರಂತಿಮಠಉದ್ಯೋಗ ಖಾತ್ರಿಯಲ್ಲಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಫಲವೃಕ್ಷೋದ್ಯಾನ: ಈಶ್ವರ ಖಂಡ್ರೆ3 ಲಕ್ಷದವರೆಗೆ ಆದಾಯ ಮಿತಿ ಹೆಚ್ಚಳ – ಸಿಎಂ ಜೊತೆ ಚರ್ಚಿಸಿ ತೀರ್ಮಾನ ಎಂದ ಸಚಿವ ಮುನಿಯಪ್ಪʻನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನ್ ಸಂಬಂಧ?ʼ ಎಂದಿದ್ದ ಸಿ.ಟಿ.ರವಿ ವಿರುದ್ಧ FIRಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ: ಯದುವೀರ್ ಒಡೆಯರ್ಬೆಂಗಳೂರು ಸ್ವಚ್ಛತೆಗೆ ಹೊಸ ಹೆಜ್ಜೆ; 100 ಬ್ಲಾಕ್‌ ಸ್ಪಾಟ್‌ಗಳ ಸ್ವಚ್ಛತಾ ಅಭಿಯಾನ ಪೂರ್ಣಹಾರಂಗಿ ಡ್ಯಾಮ್‌ನಿಂದ 5,000 ಕ್ಯೂಸೆಕ್ ನೀರು ಬಿಡುಗಡೆ ಸಾಧ್ಯತೆ – ಕಾವೇರಿ ನದಿಗೆ ಇಳಿಯದಂತೆ ಎಚ್ಚರಿಕೆ