LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ʻಕೈʼ ನಾಯಕ ಪವನ್ ಖೇರಾಗೆ ಸುಪ್ರೀಂಕೋರ್ಟ್ ಶಾಕ್ – ತೆಲಂಗಾಣ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನಿಗೆ ತಡೆ

Advertisement
Advertisement
ನವದೆಹಲಿ: ಅಸ್ಸಾಂ ಸಿಎಂ ಪತ್ನಿ ರಿಂಕಿ ಭುಯಾನ್ ಶರ್ಮಾ ವಿರುದ್ಧ ನೀಡಿದ್ದ ವಿವಾದಾತ್ಮಕ ಹೇಳಿಕೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಸುಪ್ರೀಂಕೋರ್ಟ್ ಶಾಕ್ ಕೊಟ್ಟಿದೆ. ತೆಲಂಗಾಣ ಹೈಕೋರ್ಟ್ ಏ.10 ರಂದು ನೀಡಿದ್ದ ವಾರದ ಮಟ್ಟಿಗಿನ ತಾತ್ಕಾಲಿಕ ನಿರೀಕ್ಷಣಾ ಜಾಮೀನು ಆದೇಶಕ್ಕೆ ಕೋರ್ಟ್ ತಡೆ ನೀಡಿದೆ.

ಅಸ್ಸಾಂ ಪೊಲೀಸರು ದಾಖಲಿಸಿರುವ ಮಾನನಷ್ಟ, ನಕಲಿ ದಾಖಲೆ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎ.ಎಸ್. ಚಂದೂರ್ಕರ್ ಅವರ ಪೀಠ ಈ ಮಧ್ಯಂತರ ಆದೇಶ ಹೊರಡಿಸಿದೆ. ವಿಚಾರಣೆ ವೇಳೆ ಅಸ್ಸಾಂ ಪೊಲೀಸರ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಪವನ್ ಖೇರಾ ಅವರು ನಕಲಿ ದಾಖಲೆಗಳನ್ನು ನೀಡಿ ತೆಲಂಗಾಣ ಹೈಕೋರ್ಟ್‍ನ ನ್ಯಾಯವ್ಯಾಪ್ತಿಯನ್ನು ದುರುಪಯೋಗ ಮಾಡಿಕೊಂಡು ಜಾಮೀನು ಪಡೆದಿದ್ದಾರೆ ಎಂದು ವಾದಿಸಿದರು.

ಪವನ್ ಖೇರಾ ಅವರು ತಮ್ಮ ಪತ್ನಿಯ ಆಧಾರ್ ಕಾರ್ಡ್ ಬಳಸಿಕೊಂಡು ತೆಲಂಗಾಣದಲ್ಲಿ ವಾಸಿಸುತ್ತಿರುವಂತೆ ತೋರಿಸಿದ್ದಾರೆ. ಆದರೆ ಅದೇ ದಾಖಲೆಗಳಲ್ಲಿ ಅವರ ಪತ್ನಿ ದೆಹಲಿಯಲ್ಲಿ ವಾಸಿಸುತ್ತಿರುವುದು ಕಂಡು ಬರುತ್ತದೆ ಎಂದು ತಿಳಿಸಿದರು. ಒಬ್ಬ ವ್ಯಕ್ತಿ ಬೇರೆ ಬೇರೆ ರಾಜ್ಯಗಳಲ್ಲಿ ಆಸ್ತಿ ಹೊಂದಿರುವುದರಿಂದ, ತಾನು ಇಚ್ಛಿಸಿದ ನ್ಯಾಯವ್ಯಾಪ್ತಿಯಲ್ಲಿ ಜಾಮೀನು ಪಡೆಯಲು ಅವಕಾಶ ಸಿಗುವುದಿಲ್ಲ. ಇದು ಕಾನೂನಿನ ದುರುಪಯೋಗ ಎಂದು ತುಷಾರ್ ಮೆಹ್ತಾ ಹೇಳಿದರು.

ಆಧಾರ್ ಕಾರ್ಡ್‍ನ ಮುಂಭಾಗದಲ್ಲಿ ಖೇರಾ ಹೆಸರು ಇದ್ದರೂ, ಹಿಂಭಾಗದಲ್ಲಿ ಅವರ ಪತ್ನಿಯ ವಿಳಾಸ ಉಲ್ಲೇಖವಾಗಿದೆ. ಹೀಗಾಗಿ ನಕಲಿ ದಾಖಲೆ ಬಳಸಿ ತೆಲಂಗಾಣ ಹೈಕೋರ್ಟ್ ನ್ಯಾಯವ್ಯಾಪ್ತಿಯ ಲಾಭ ಪಡೆದಿರುವ ಸಾಧ್ಯತೆ ಇದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿ, ತೆಲಂಗಾಣ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿದೆ. ಜೊತೆಗೆ, ಪವನ್ ಖೇರಾ ಅವರು ಅಸ್ಸಾಂ ನ್ಯಾಯವ್ಯಾಪ್ತಿಯ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿದೆ. ಮೂರು ವಾರಗಳಲ್ಲಿ ನೋಟಿಸ್‌ಗೆ ಪ್ರತಿಕ್ರಿಯೆ ಸಲ್ಲಿಸಲು ಸೂಚಿಸಲಾಗಿದೆ.

ಏನಿದು ಪ್ರಕರಣ?
ಕೆಲವು ದಿನಗಳ ಹಿಂದೆ ಪತ್ರಿಕಾಗೋಷ್ಠಿ ನಡೆಸಿದ್ದ ಪವನ್ ಖೇರಾ, ಅಸ್ಸಾಂ ಸಿಎಂ ಪತ್ನಿ ರಿಂಕಿ ಭುಯಾನ್ ಶರ್ಮಾ ವಿರುದ್ಧ ‘ಮುಸ್ಲಿಂ ರಾಷ್ಟ್ರಗಳ ಪಾಸ್‌ಪೋರ್ಟ್’ ಯಾಕೆ ಬೇಕು ಎನ್ನುವ ರೀತಿ ವಿವಾದಾತ್ಮಕ ಆರೋಪಗಳನ್ನು ಮಾಡಿದ್ದರು. ‘ರಿಂಕಿ ಅವರು ಮೂರು ದೇಶಗಳ ಪಾಸ್‌ಪೋರ್ಟ್ ಹೊಂದಿದ್ದಾರೆ, ದುಬೈನಲ್ಲಿ ಅಘೋಷಿತ ಆಸ್ತಿ ಹಾಗೂ ಅಮೆರಿಕದಲ್ಲಿ ಶೆಲ್ ಕಂಪನಿಗಳನ್ನು ಹೊಂದಿದ್ದಾರೆ’ ಎಂದು ಖೇರಾ ದೂರಿದ್ದರು. ಈ ಆರೋಪಗಳು ದುರುದ್ದೇಶಪೂರಿತ ಎಂದು ರಿಂಕಿ ಭುಯಾನ್ ಕೋರ್ಟ್ ಮೆಟ್ಟಿಲೇರಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಆದಾಯ ಪ್ರಮಾಣಪತ್ರ ಸಲ್ಲಿಕೆ – KPSC ಅಧ್ಯಕ್ಷರ ಪುತ್ರಿ ವಿರುದ್ಧ ಎಫ್‌ಐಆರ್ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ಆರೋಪ – ಕಾಸು ಕೊಟ್ರೆ ತಪಾಸಣೆಯೆ ಇಲ್ವಂತೆ!ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್‌ – ಗುಂಡು ಹಾರಿಸಿಕೊಂಡು ಕೊಡಗಿನ ಯುವಕ ಆತ್ಮಹತ್ಯೆಶಾಶ್ವತ ನಿವಾಸ ಪ್ರಮಾಣಪತ್ರ ರಾಜ್ಯ ಸರ್ಕಾರ ಯಾಕೆ ಕೊಡಬಾರದು – ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆತನ್ನ ಪರ ತೀರ್ಪು ಕೊಡಲಿ ಅಂತ ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಾಟಮಂತ್ರ – ಮಹಿಳೆ ಬಂಧನಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಇರ್ಫಾನ್ ಅರೆಸ್ಟ್‌ಬೆಂಗಳೂರಿನಲ್ಲಿ ಮತ್ತೆ ತ್ರಿವಳಿ ಕೊಲೆ – ತಾಯಿ, ಅಜ್ಜಿ, ಮಾವನನ್ನು ಕೊಂದು ಪರಾರಿಯಾಗಬೇಕಿದ್ದವ ಸೂಸೈಡ್‌ಪ್ರಶಾಂತ್ ಕಿಶೋರ್ ವಿರುದ್ಧ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಯನ್ನು ಬಿಜೆಪಿ ದಿಢೀರ್‌ ಬದಲಾಯಿಸಿದ್ದು ಯಾಕೆ?ತೆಲಂಗಾಣದಲ್ಲಿ ಪೋಕ್ಸೋ ಆರೋಪಿಯಿಂದ ಮಾರಣಹೋಮ – ಪತ್ನಿ, ಮಕ್ಕಳು, ಸಂತ್ರಸ್ತೆ ಸೇರಿ 6 ಜನರ ಬರ್ಬರ ಹತ್ಯೆಮಹಾರಾಷ್ಟ್ರದಲ್ಲಿ ತಗ್ಗಿದ ಮಳೆ – ಚಿಕ್ಕೋಡಿ ವ್ಯಾಪ್ತಿಯ 3 ಪ್ರಮುಖ ಸೇತುವೆಗಳು ಸಂಚಾರಕ್ಕೆ ಮುಕ್ತ