LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೋಷಿಯಲ್‌ ಮೀಡಿಯಾ ಮೂಲಕ ಪಾಕ್ ಜೊತೆ ಸಂಪರ್ಕ ಶಂಕೆ; ಇಬ್ಬರು ವಶಕ್ಕೆ

Advertisement

ಕಲಬುರಗಿ: ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ ಹೊಂದಿದ್ದಾರೆ ಎನ್ನಲಾದ ಇಬ್ಬರನ್ನು ಉತ್ತರ ಪ್ರದೇಶದ ಆ್ಯಂಟಿ ಟೆರರ್ ಸ್ಕ್ವಾಡ್ ಹಾಗೂ ಕಲಬುರಗಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ

ಕೇಂದ್ರ ಗುಪ್ತಚರ ಇಲಾಖೆಯಿಂದ ಬಂದ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆದಿದೆ ಎನ್ನಲಾಗಿದೆ

ಉತ್ತರ ಪ್ರದೇಶ ಮೂಲದ ಸಮೀರ್ ಹಾಗೂ ಸಲ್ಮಾನ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರೂ ಉತ್ತರ ಪ್ರದೇಶದ ನಿವಾಸಿ ವಿಳಾಸ ಹೊಂದಿದ್ದಾರೆ. ವಾಟ್ಸ್‌ಆಪ್ ಕಾಲ್ ಹಾಗೂ ಫೇಸ್‌ಬುಕ್ ಮೂಲಕ ಪಾಕಿಸ್ತಾನದ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

ಕೆಲವು ದಿನಗಳಿಂದ ಇಬ್ಬರ ಸಾಮಾಜಿಕ ಜಾಲತಾಣ ಚಟುವಟಿಕೆಗಳ ಮೇಲೆ ನಿಗಾ ಇಡಲಾಗಿತ್ತು ಎನ್ನಲಾಗಿದೆ. ಪಾಕಿಸ್ತಾನದಿಂದ ನಿರ್ವಹಿಸಲಾಗುತ್ತಿದೆ ಎನ್ನಲಾದ ಕೆಲವು ಸೋಷಿಯಲ್‌ ಮೀಡಿಯಾ ಪೇಜ್‌ಗಳೊಂದಿಗೆ ಸಮೀರ್ ಸಂಪರ್ಕ ಹೊಂದಿದ್ದ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಅಧಿಕಾರಿಗಳು ಆತನ ಚಲನವಲನದ ಮೇಲೆ ಮಾನಿಟರಿಂಗ್ ನಡೆಸಿದ್ದರು.

ದಾಳಿ ವೇಳೆ ಸಮೀರ್ ಉಳಿದುಕೊಂಡಿದ್ದ ರೂಮ್‌ನಲ್ಲಿ ಕೆಲವು ಮ್ಯಾಪ್‌ಗಳು ಪತ್ತೆಯಾಗಿವೆ. ಈ ಮ್ಯಾಪ್‌ಗಳು ಏಕೆ ಇಡಲಾಗಿತ್ತು, ಅವುಗಳ ಉದ್ದೇಶವೇನು ಎಂಬುದರ ಬಗ್ಗೆಯೂ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. 

ಕಲಬುರಗಿಯ ಅಜ್ಞಾತ ಸ್ಥಳದಲ್ಲಿ ಇಬ್ಬರನ್ನೂ ವಿಚಾರಣೆ ನಡೆಸಲಾಗಿದ್ದು, ಬಳಿಕ ಮಹಮ್ಮದ್ ಸಮೀರ್‌ನನ್ನು ಉತ್ತರ ಪ್ರದೇಶದ ATS ತಂಡಕ್ಕೆ ಹಸ್ತಾಂತರಿಸಲಾಗಿದೆ ಎನ್ನಲಾಗಿದೆ. ಪಾಕಿಸ್ತಾನದ ವ್ಯಕ್ತಿಗಳು ಹಾಗೂ ವಿವಿಧ ಸಂಘಟನೆಗಳೊಂದಿಗೆ ಆತನಿಗೆ ಯಾವ ರೀತಿಯ ಸಂಪರ್ಕ ಇತ್ತು ಎಂಬುದರ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ತನಿಖೆ ಮುಂದುವರಿದಿದ್ದು, ಆರೋಪಿಗಳ ಸಂಪರ್ಕ ಜಾಲ ಹಾಗೂ ಸಾಮಾಜಿಕ ಜಾಲತಾಣ ಚಟುವಟಿಕೆಗಳ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ನರಗುಂದ ಬಂದ್ಗೌರಿಯ ಪೂಜೆಗೆ ಬೇಕೇ ಬೇಕು ಈ ವಿಶೇಷ ಪುಷ್ಪ – ಅದ್ಯಾವುದು ಗೊತ್ತಾ?ಸಾಲು ಸಾಲು ರಜೆ – ಊರಿನತ್ತ ಜನರ ದಂಡು; ನವಯುಗ ಟೋಲ್ ಬಳಿ ಟ್ರಾಫಿಕ್‌ ಜಾಮ್‌ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!ಪರಪುರುಷನೊಂದಿಗೆ ಲವ್ವಿಡವ್ವಿ – ಹಾಸಿಗೆ ಹಿಡಿದ ಪತಿ ಕೊಂದು ಹೃದಯಾಘಾತ ಅಂತ ನಾಟಕವಾಡಿದ್ದ ಹೈನಾತಿಬೇರೆ ಯಾವುದೇ ದೇಶದಲ್ಲಿ ಹೀಗೆ ನಡೆಯೋದಿಲ್ಲ – ಸತೀಶ್‌ ಜಾರಕಿಹೊಳಿ ಪರ ವಿಜಯ್‌ ಮಲ್ಯ ಬ್ಯಾಟಿಂಗ್‌ಮಸೀದಿ ಇರೋ ರಸ್ತೆಯಲ್ಲಿ ಗಣಪತಿ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿಡಿಸ್ತೀನಿ: ಇನ್ಸ್‌ಪೆಕ್ಟರ್‌ ಧಮ್ಕಿಸೆ.14ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟಕ್ಕೆ ನಿಷೇಧಕ್ಸ್ ಸಭೆಗೂ ಮುನ್ನ ಮಹತ್ವದ ನಿರ್ಧಾರ ಘೋಷಿಸಿದ ಚೀನಾ – 6 ವರ್ಷಗಳ ನಂತರ ಭಾರತಕ್ಕೆ ಏರ್ಲೈನ್ಸ್ ಸೇವೆ ಪುನಾರಂಭಒಂದೇ ವೇಲ್‌ನಲ್ಲಿ ನೇಣಿಗೆ ಕೊರಳೊಡ್ಡಿದ ಆಂಟಿ & ಯುವಕ – ಲವ್‌ಗೆ ಕುಟುಂಬಸ್ಥರು ವಿರೋಧಿಸಿದ್ದಕ್ಕೆ ಆತ್ಮಹತ್ಯೆ ಶಂಕೆ