ನವದೆಹಲಿ: ಭಾರತದಲ್ಲಿ ಸಮಾನತೆ ಇರಬಾರದು ಎಂಬ ಕಾರಣಕ್ಕೆ ಸಂವಿಧಾನವನ್ನು ಮುಗಿಸುವುದೇ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಏಪ್ರಿಲ್ 14ರಂದು ನಡೆಯಲಿರುವ ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ದೆಹಲಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಂಬೇಡ್ಕರ್ ಹಾದಿಯಲ್ಲಿ ನಡಿಗೆ, ಸಂವಿಧಾನಕ್ಕಾಗಿ ನಡಿಗೆ ಮ್ಯಾರಾಥಾನ್ ಚಾಲನೆ ನೀಡಿ ರಾಹುಲ್ ಗಾಂಧಿ ಮಾತನಾಡಿದ್ದಾರೆ.
ಸಂವಿಧಾನ ಭಾರತದ ಅಡಿಪಾಯವಾಗಿದೆ. ಸಂವಿಧಾನವಿಲ್ಲದಿದ್ದರೆ ಇಂದು ನಾವು ಭಾರತ ಎಂದು ಕರೆಯಲು ಸಾಧ್ಯವಾಗುತ್ತಿರಲಿಲ್ಲ, ಆದರೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಮನಸ್ಥಿತಿ ಹೊಂದಿರುವ ಜನರು ಇಂದು ಸಂವಿಧಾನವನ್ನ ಅಳಿಸಿಹಾಕಲು ಬಯಸುತ್ತಿದ್ದಾರೆ. ಭಾರತದ ಪ್ರತಿಯೊಬ್ಬ ಪ್ರಜೆ ಸಮನಾಗಿ ಕಾಣಿಸಿಕೊಳ್ಳುವುದು ಬಿಜೆಪಿಗೆ ಇಷ್ಟವಿಲ್ಲ. ಆದ್ದರಿಂದಲೇ ಸಂವಿಧಾನದ ನಾಶ ಮಾಡಲು ಯತ್ನಿಸುತ್ತಿದ್ದಾರೆ, ಸಂವಿಧಾನವನ್ನು ರಕ್ಷಿಸುವುದು ನಮ್ಮ ಗುರಿ ಎಂದಿದ್ದಾರೆ.

