LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುಡುಕ ಗಂಡನ ಬಿಟ್ಟು ಪ್ರೀತಿಸಿದವನ ಜೊತೆ ಹೋದ ಮಹಿಳೆಗೆ ವಿಷ ಕುಡಿಸಿ ಕೊಂದ ಪೋಷಕರು.!

Advertisement
Advertisement
ಚಿಕ್ಕೋಡಿ: ಹುಕ್ಕೇರಿ ತಾಲೂಕಿನ ನದಿಗುಡಿಕೇತರ ಗ್ರಾಮದಲ್ಲಿ ಮರ್ಯಾದಾ ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಸಿದವನ ಜೊತೆ ಓಡಿ ಹೋಗಿದ್ದ ಮಹಿಳೆಯನ್ನು ಪೋಷಕರು ಕರೆತಂದು ವಿಷ ಕುಡಿಸಿ ಹತ್ಯೆ ಮಾಡಿದ್ದಾರೆ. ಬಳಿಕ ಸಾಕ್ಷ್ಯ ನಾಶಕ್ಕಾಗಿ ಶವವನ್ನು ಸುಟ್ಟ ಹಾಕಿದ್ದಾರೆ.

ಕೊಲೆಯಾದ ಮಹಿಳೆಯನ್ನು ಗ್ರಾಮದ ಸತ್ತೆವ್ವಾ ಹೆಳವರ್ ಎಂದು ಗುರುತಿಸಲಾಗಿದೆ. ಈಕೆ ಇದೇ ಗ್ರಾಮದ ಕೃಷ್ಣಾ ಪಾಟೀಲ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಈ ವಿಚಾರ ಮನೆಯಲ್ಲಿ ಗೊತ್ತಾಗಿ ರಾಯಬಾಗ ತಾಲೂಕಿನ ಹನಬರಟ್ಟಿ ಗ್ರಾಮದ ಸಂತೋಷ ಹೇಳವಿ ಎಂಬಾತನ ಜೊತೆ ನಾಲ್ಕು ವರ್ಷಗಳ ಹಿಂದೆ ಮದುವೆ ಮಾಡಿದ್ದರು.

ಮದುವೆಯಾದ್ರೂ ಪ್ರೀತಿಸಿದ ಕೃಷ್ಣಾ ಜೊತೆಗೆ ಸತ್ತೆವ್ವಾ ಸಂಪರ್ಕದಲ್ಲಿದ್ದಳು. ಗಂಡ ಕುಡಿಯುತ್ತಿದ್ದಾನೆ, ತನ್ನನ್ನ ನೋಡಿಕೊಳ್ತಿಲ್ಲ ಎಂದು ಫೇ.17 ರಂದು ಗಂಡನ ಮನೆಯಿಂದ ಕೃಷ್ಣಾನ ಜೊತೆಗೆ ಸತ್ತೆವ್ವಾ ಬಂದಿದ್ದಳು. ಬಳಿಕ ಸವದತ್ತಿ ತಾಲೂಕಿನ ಬೆಳವಡಿಯಲ್ಲಿ ಬಾಡಿಗೆ ಮನೆ ಮಾಡಿ ಉಳಿದುಕೊಂಡಿದ್ದರು. 15 ದಿನಗಳ ಹಿಂದೆ ಇಬ್ಬರನ್ನು ಕುಟುಂಬಸ್ಥರು ಕರೆದುಕೊಂಡು ಬಂದಿದ್ದರು.

ಬಳಿಕ ಸತ್ತೆವ್ವಾಳನ್ನ ಆಕೆಯ ಅಣ್ಣ ಕರೆದುಕೊಂಡು ಬಂದು ಮಹಾರಾಷ್ಟ್ರದ ಶಿರೋಳದಲ್ಲಿರುವ ಅಕ್ಕನ ಮನೆಗೆ ಕಳುಹಿಸಿದ್ದ. ಅಲ್ಲಿ ಕೃಷ್ಣಾ ಪಾಟೀಲ್‍ನನ್ನು ಮರೆಯುವಂತೆ ಆಕೆಗೆ ಒತ್ತಡ ಹಾಕಲಾಗುತ್ತಿತ್ತು. ಇದಕ್ಕೆ ಒಪ್ಪದಿದ್ದಾಗ ಶಿರೋಳದಿಂದ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಅರಗ ಗ್ರಾಮಕ್ಕೆ ಕರೆದುಕೊಂಡು ಬಂದು ಮಾರ್ಚ್ 21ರಂದು ಮಹಿಳೆಗೆ ವಿಷ ಕುಡಿಸಿ ಕೊಲೆ ಮಾಡಿದ್ದರು. ಬಳಿಕ ಸಾಕ್ಷಿ ನಾಶಕ್ಕಾಗಿ ಆಕೆಯ ಹಾಸಿಗೆ ಬಟ್ಟೆ ಸಮೇತ ಶವ ಸುಟ್ಟು ಹಾಕಿದ್ದರು.

ಸತ್ತೆವ್ವಾ ಸಂಪರ್ಕಕ್ಕೆ ಸಿಗದಿದ್ದಾಗ ಸಂಶಯಗೊಂಡಿದ್ದ ಪ್ರಿಯಕರ ಕೃಷ್ಣಾ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ. ದೂರಿನನ್ವಯ ತನಿಖೆ ಕೈಗೊಂಡಿದ್ದ ಸಿಪಿಐ ಜಾವೇದ್ ಮುಶಾಪುರಿ, ಮಹಿಳೆಯ ಅಣ್ಣ ಶಾನೂರನನ್ನು ಕರೆದುಕೊಂಡು ಬಂದು ವಿಚಾರಣೆ ನಡೆಸಿದಾಗ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ಪ್ರಕರಣ ಸಂಬಂಧ ಆರೋಪಿಗಳಾದ ಶಾನೂರ, ಪ್ರಕಾಶ್ ಹಾಗೂ ಕಲ್ಲಪ್ಪ ಎಂಬವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಆದಾಯ ಪ್ರಮಾಣಪತ್ರ ಸಲ್ಲಿಕೆ – KPSC ಅಧ್ಯಕ್ಷರ ಪುತ್ರಿ ವಿರುದ್ಧ ಎಫ್‌ಐಆರ್ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ಆರೋಪ – ಕಾಸು ಕೊಟ್ರೆ ತಪಾಸಣೆಯೆ ಇಲ್ವಂತೆ!ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್‌ – ಗುಂಡು ಹಾರಿಸಿಕೊಂಡು ಕೊಡಗಿನ ಯುವಕ ಆತ್ಮಹತ್ಯೆಶಾಶ್ವತ ನಿವಾಸ ಪ್ರಮಾಣಪತ್ರ ರಾಜ್ಯ ಸರ್ಕಾರ ಯಾಕೆ ಕೊಡಬಾರದು – ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆತನ್ನ ಪರ ತೀರ್ಪು ಕೊಡಲಿ ಅಂತ ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಾಟಮಂತ್ರ – ಮಹಿಳೆ ಬಂಧನಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಇರ್ಫಾನ್ ಅರೆಸ್ಟ್‌ಬೆಂಗಳೂರಿನಲ್ಲಿ ಮತ್ತೆ ತ್ರಿವಳಿ ಕೊಲೆ – ತಾಯಿ, ಅಜ್ಜಿ, ಮಾವನನ್ನು ಕೊಂದು ಪರಾರಿಯಾಗಬೇಕಿದ್ದವ ಸೂಸೈಡ್‌ಪ್ರಶಾಂತ್ ಕಿಶೋರ್ ವಿರುದ್ಧ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಯನ್ನು ಬಿಜೆಪಿ ದಿಢೀರ್‌ ಬದಲಾಯಿಸಿದ್ದು ಯಾಕೆ?ತೆಲಂಗಾಣದಲ್ಲಿ ಪೋಕ್ಸೋ ಆರೋಪಿಯಿಂದ ಮಾರಣಹೋಮ – ಪತ್ನಿ, ಮಕ್ಕಳು, ಸಂತ್ರಸ್ತೆ ಸೇರಿ 6 ಜನರ ಬರ್ಬರ ಹತ್ಯೆಮಹಾರಾಷ್ಟ್ರದಲ್ಲಿ ತಗ್ಗಿದ ಮಳೆ – ಚಿಕ್ಕೋಡಿ ವ್ಯಾಪ್ತಿಯ 3 ಪ್ರಮುಖ ಸೇತುವೆಗಳು ಸಂಚಾರಕ್ಕೆ ಮುಕ್ತ