LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಾಥಮಿಕ ಅಂಕಿ ಅಂಶಗಳಿಲ್ಲದೆ ಸಭೆಗೆ ಏಕೆ ಬರ್ತೀರಿ? – ಜಿಬಿಎ ಎಂಜಿನಿಯರ್‌ಗಳಿಗೆ ಕೃಷ್ಣ ಬೈರೇಗೌಡ ಕ್ಲಾಸ್

Advertisement
Advertisement

ಬೆಂಗಳೂರು: ನಿಮ್ಮದೇ ಇಲಾಖೆಗೆ ಕಾರ್ಯ ಪ್ರಗತಿಯ ಬಗ್ಗೆ ಪ್ರಾಥಮಿಕ ಅಂಕಿಅಂಶಗಳೂ ಇಲ್ಲದೆ ಸಭೆಗೆ ಏಕೆ ಬರುತ್ತೀರಿ ಎಂದು ಡೇಟಾ ಇಲ್ಲದೆ ಬಂದ ಜಿಬಿಎ ಎಂಜಿನಿಯರ್‌ಗಳಿಗೆ  ಸಚಿವ ಕೃಷ್ಣ ಬೈರೇಗೌಡ  ಕ್ಲಾಸ್ ತೆಗೆದುಕೊಂಡಿದ್ದಾರೆ.

ಮಂಗಳವಾರ ನಗರದಲ್ಲಿ ಎಲ್‌ಇಡಿ ಬೀದಿ ದೀಪಗಳನ್ನು  ಅಳವಡಿಸುವ ಕುರಿತು ಜಿಬಿಎ ಎಲೆಕ್ಟ್ರಿಕ್ ಎಂಜಿನಿಯರ್‌ಗಳ ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ನಗರದ ಐದೂ ಪಾಲಿಕೆಗಳಲ್ಲಿ ಬೀದಿ ದೀಪಗಳಿಗೆ ವಿದ್ಯುತ್ ಬಿಲ್ ಎಷ್ಟು ಪಾವತಿಸಲಾಗುತ್ತಿದೆ? ಎಲ್‌ಇಡಿ ದೀಪ ಅಳವಡಿಸಿದ ನಂತರದ ವ್ಯತ್ಯಾಸ ಎಷ್ಟು ಎಂಬ ಅಂಕಿಅಂಶ ನೀಡುವಂತೆ ಸಚಿವ ಕೃಷ್ಣ ಬೈರೇಗೌಡರು ಸಭೆಯಲ್ಲಿ ಕೋರಿದರು. ಆದರೆ ಅಧಿಕಾರಿಗಳ ಬಳಿ ಯಾವುದೇ ಅಧಿಕೃತ ಅಂಕಿಅಂಶ ಇರಲಿಲ್ಲ. ಈ ವೇಳೆ ಅಸಮಾಧಾನ ಹೊರಹಾಕಿದ ಅವರು, ಬೇಸಿಕ್ ಡೇಟಾ ಇಲ್ಲ, ಪ್ರಶ್ನೆಗೆ ಉತ್ತರ ಇಲ್ಲ, ಸಭೆ ಕರೆದರೆ ಕನಿಷ್ಠ ಸಿದ್ಧತೆಯೂ ಇಲ್ಲದೆ ಮತ್ಯಾಕೆ ನನ್ನ ಮುಖ ನೋಡಿಕೊಂಡು ಹೋಗಲು ಬಂದಿದ್ದಾ? ಸರ್ಕಾರಿ ಸೌಕರಿ ಅಂದ್ರೆ ಕೈ ಬೀಸಿಕೊಂಡು ಬರ್ಬೋದು ಹೋಗ್ಬೋದು ಎಂಬ ಧೋರಣೆ ಬೆಳೆದುಬಿಟ್ಟಿದೆ. ಅಧಿಕಾರಿಗಳ ಇಂತಹ ವರ್ತನೆಯಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಎಂದರು. 

ನಗರದ ಎಲ್‌ಇಡಿ ಬೀದಿ ದೀಪಗಳನ್ನು ಅಳವಡಿಸುವ ಯೋಜನೆ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಂಡರೆ ಶೇಕಡಾ 61.01% ರಷ್ಟು ವಿದ್ಯುತ್ ಉಳಿತಾಯ ಮಾಡಬಹುದು. ಆದರೆ, ಈ ಯೋಜನೆ ಕುಂಟುತ್ತಾ ಸಾಗಲು ಕಾರಣವೇನು? ಎಂದು ಅಧಿಕಾರಿಗಳ ಬಳಿ ಸಚಿವ ಕೃಷ್ಣ ಬೈರೇಗೌಡ ಅವರು ಸ್ಪಷ್ಟೀಕರಣ ಕೇಳಿದರು. 

ಎಲ್‌ಇಡಿ ಬಲ್ಬ್‌ಗಳನ್ನು ಅಳವಡಿಸುವ ಕುರಿತು 2025 ಮೇ 07 ಮತ್ತು 15ರಂದು ಕಾರ್ಯಾದೇಶ ನೀಡಲಾಗಿದೆ. ಯೋಜನೆಯಂತೆ ನಗರದಾದ್ಯಂತ ಒಟ್ಟು 3,02,919 ಎಲ್‌ಇಡಿ ದೀಪಗಳನ್ನು ಅಳವಡಿಸಬೇಕಿತ್ತು. ಆದರೆ ಪ್ರಸ್ತುತ 2,67,270 ದೀಪಗಳನ್ನು ಮಾತ್ರ ಅಳವಡಿಸಲಾಗಿದೆ. ಅಲ್ಲದೆ, ಒಟ್ಟು 24,677 ಸಿಸಿಎಂಎಸ್ ಪ್ಯಾನಲ್‌ಗಳನ್ನು ಅಳವಡಿಸಬೇಕಿತ್ತು. ಆದರೆ ಪ್ರಸ್ತುತ 7,567 ಪ್ಯಾನಲ್‌ಗಳನ್ನು ಮಾತ್ರ ಅಳವಡಿಸಲಾಗಿರುವುದು ಏಕೆ? ಬಾಕಿ ಕೆಲಸ ಕುಂಟುತ್ತಾ ಸಾಗಲು ಕಾರಣವೇನು? ಎಂದು ಅಸಮಾಧಾನ ಹೊರಹಾಕಿದರು. 

ಬೀದಿ ದೀಪಗಳು ಸರಿಯಾಗಿ ಉರಿಯುತ್ತಿಲ್ಲವೆಂಬ ನಿರಂತರ ದೂರುಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮತ್ತು ವಿದ್ಯುತ್ ಉಳಿಸುವ ಇಂಧನ ದಕ್ಷತೆಯ ಯೋಜನೆಯ ಸಲುವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ, ಅಧಿಕಾರಿಗಳು ಸೂಕ್ತ ಸಮಯಕ್ಕೆ ಯೋಜನೆಯನ್ನು ಪೂರ್ಣಗೊಳಿಸದೆ ಬೋಗಸ್ ಅಂಕಿಅಂಶಗಳನ್ನು ನೀಡುತ್ತಿರುವುದು ಸರಿಯಲ್ಲ ಎಂದು ಸಭೆಯಲ್ಲಿ ವಿಷಾದಿಸಿದ ಅವರು, ಬಾಕಿ ಉಳಿದಿರುವ ಎಲ್ಲಾ ಎಲ್‌ಇಡಿ ದೀಪಗಳು ಮತ್ತು ಸಿಸಿಎಂಎಸ್ ಪ್ಯಾನಲ್‌ಗಳನ್ನು ಅಳವಡಿಸಲು ಆಗಸ್ಟ್ 3, 2026ರಿಂದ ಜಾರಿಗೆ ಬರುವಂತೆ ಹೆಚ್ಚುವರಿ 2 ತಿಂಗಳ ಕಾಲಾವಕಾಶ ನೀಡುವುದಾಗಿ ತಿಳಿಸಿದರು. 

ಪ್ರಸ್ತುತ ಇರುವ ಎಲ್ಲಾ ಸಾಂಪ್ರದಾಯಿಕ ಬೀದಿ ದೀಪಗಳನ್ನು ತೆಗೆದು, ಅವುಗಳ ಜಾಗದಲ್ಲಿ ಇಂಧನ ದಕ್ಷತೆಯುಳ್ಳ ಎಲ್‌ಇಡಿ ದೀಪಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ದೀಪಗಳೇ ಇಲ್ಲದ ಆಯ್ದ ಪ್ರದೇಶಗಳಲ್ಲಿ ಹೆಚ್ಚುವರಿ ಬೀದಿ ದೀಪಗಳನ್ನು ಅಳವಡಿಸಬೇಕು. ಬೀದಿ ದೀಪಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಆಟೋಮೇಷನ್ ವ್ಯವಸ್ಥೆಯಾದ ಸಿಸಿಎಂಎಸ್ ಅಳವಡಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಯಿತು. 

ದೀಪ ಸುಸ್ಥಿಯಲ್ಲಿಲ್ಲದಿದ್ದರೆ ಗುತ್ತಿಗೆದಾರರಿಗೆ ದಂಡ:
‘ಸಹಾಯ’ ಪೋರ್ಟಲ್‌ನಲ್ಲಿ ಸ್ವೀಕೃತವಾಗುವ ದೂರುಗಳ ಪೈಕಿ ಶೇ.34ರಷ್ಟು ಕಾರ್ಯನಿರ್ವಹಿಸದ ಬೀದಿ ದೀಪಗಳ ಕುರಿತ ದೂರುಗಳು ದಾಖಲಾಗುತ್ತಿವೆ. ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವಜನಿಕರು ನೀಡಿದ ದೂರುಗಳನ್ನು 48 ಗಂಟೆಗಳ ಒಳಗಾಗಿ ಪರಿಹರಿಸಬೇಕು. ಒಂದು ವೇಳೆ ಗುತ್ತಿಗೆದಾರರು ಈ ಸಮಸ್ಯೆಯನ್ನು ಪರಿಹರಿಸದಿದ್ದಲ್ಲಿ ಬೀದಿ ದೀಪಗಳನ್ನು ಸುಸ್ಥಿತಿಯಲ್ಲಿಡಲು ವಿಫಲರಾದ ಗುತ್ತಿಗೆದಾರರಿಗೆ ದಂಡ ವಿಧಿಸಬೇಕು. ದೀಪಗಳ ಸಂಖ್ಯೆ ಮತ್ತು ವಿಳಂಬವಾದ ದಿನಗಳ ಆಧಾರದ ಮೇಲೆ ದಂಡದ ಮೊತ್ತವನ್ನು ಲೆಕ್ಕಹಾಕಬೇಕು. ಅಲ್ಲದೆ, ಸರಿಯಾಗಿ ಸ್ಪಂದಿಸದ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮಗಳನ್ನೂ ತೆಗೆದುಕೊಳ್ಳಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭವ್ಯ ತಿರಂಗಾ ರ್ಯಾಲಿ ದೇಶಭಕ್ತಿಯ ಸಂಭ್ರಮದೊಂದಿಗೆ ಯಶಸ್ವಿ3 ನಿಮಿಷದಲ್ಲಿ ಹನುಮಾನ್ ಚಾಲೀಸ ಪಠಣ – ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ 4 ವರ್ಷದ ಬಾಲಕ!ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು – ಆ.14 ರಂದು ವಿಧಾನಸೌಧದ ಮುಂದೆ ಪ್ರತಿಭಟನೆಗೆ ಸಿದ್ಧತೆಪರಪ್ಪನ ಅಗ್ರಹಾರದಲ್ಲಿ ಮೊಬೈಲ್‌ ಪತ್ತೆ ಪ್ರಕರಣ – 2ನೇ ಎಫ್‌ಐಆರ್‌ ದಾಖಲುಯಂತ್ರಕ್ಕೆ ಸಿಲುಕಿದ್ದ ಅಡುಗೆ ಸಿಬ್ಬಂದಿಯನ್ನು ರಕ್ಷಿಸಿದ ಬಾಲಕ – ಪುಟಾಣಿಯ ಸಾಹಸಕ್ಕೆ ಡಿಕೆಶಿ ಮೆಚ್ಚುಗೆಆ.15ರಂದು ವಿಧಾನಸೌಧದಲ್ಲಿ ಫ್ರೀಡಂ ಹಬ್ಬ – QR ಕೋಡ್ ಮೂಲಕ ಪೂರ್ವ ನೋಂದಣಿ ಕಡ್ಡಾಯಕೇಸ್‌ ಇತ್ಯರ್ಥಕ್ಕೆ ಲಂಚಕ್ಕೆ ಕೈಯೊಡ್ಡಿದ ಪಿಎಸ್‌ಐ ʻಲೋಕಾʼ ಬಲೆಗೆಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ನೇಣಿಗೆ ಕೊರಳೊಡ್ಡಿದ ಪ್ರಿಯಕರಸೋಷಿಯಲ್‌ ಮೀಡಿಯಾ ಮೂಲಕ ಪಾಕ್ ಜೊತೆ ಸಂಪರ್ಕ ಶಂಕೆ; ಇಬ್ಬರು ವಶಕ್ಕೆಹೈಕೋರ್ಟ್‌ನಲ್ಲೂ ದರ್ಶನ್‌ಗೆ ಹಿನ್ನಡೆ – ಮಾಫಿ ಸಾಕ್ಷಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿಲ್ಲ ಎಂದ ಕೋರ್ಟ್‌