ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಗಣೇಶಮೂರ್ತಿ ಹೃದಯಾಘಾತದಿಂದ ಸಾವು

Mar 28, 2024 - 10:59
 27
Google  News Join WhatsApp Join Telegram Live

ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಗಣೇಶಮೂರ್ತಿ ಹೃದಯಾಘಾತದಿಂದ ಸಾವು

Panchayat Swaraj Samachar News Desk.

ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಗಣೇಶಮೂರ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಡಿಎಂಕೆ ಸಂಸದ ಗಣೇಶಮೂರ್ತಿ ನಿಧನರಾಗಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಈರೋಡ್‌ನಿಂದ ಡಿಎಂಕೆ ಟಿಕೆಟ್‌ನಲ್ಲಿ ಆಯ್ಕೆಯಾದ ಗಣೇಶಮೂರ್ತಿ ಅವರಿಗೆ ಏಕಾಏಕಿ ಅನಾರೋಗ್ಯ ಕಾಣಿಸಿಕೊಂಡಿತ್ತು ಆಸ್ಪತ್ರೆಗೆ ದಾಖಲಿಸಿದ ಬಳಿಕ ಕೀಟನಾಶಕ ಸೇವಿಸಿರುವ ವಿಚಾರ ಬೆಳಕಿಗೆ ಬಂದಿತ್ತು.

ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಇಬ್ಬರು ವೈದ್ಯರು ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಮಧ್ಯಾಹ್ನ 2.30 ರ ಸುಮಾರಿಗೆ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಡಿಎಂಕೆ ನಾಯಕ ದುರೈ ವೈಕೋ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಣೇಶಮೂರ್ತಿ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಇಸಿಎಂಒ ಚಿಕಿತ್ಸೆಯಲ್ಲಿದೆ ಎಂದು ಹೇಳಿದ್ದಾರೆ.

ಸಚಿವ ಎಸ್.ಮುತ್ತುಸಾಮಿ, ಮೊಡಕುರಿಚಿಯ ಬಿಜೆಪಿ ಶಾಸಕ ಡಾ.ಸಿ.ಸರಸ್ವತಿ, ಎಐಎಡಿಎಂಕೆಯ ಕೆ.ವಿ.ರಾಮಲಿಂಗಂ ಮುಂತಾದ ರಾಜಕೀಯ ಮುಖಂಡರು ಆಸ್ಪತ್ರೆಗೆ ಧಾವಿಸಿ ಗಣೇಶಮೂರ್ತಿ ಅವರ ಆರೋಗ್ಯ ವಿಚಾರಿಸಿದರು. ಅವರ ಈ ನಿರ್ಧಾರಕ್ಕೆ ಕಾರಣವೇನೆಂಬುದು ತಿಳಿದುಬಂದಿಲ್ಲ.

Google News Join Facebook Live 24/7 Help Desk

Tags: