ಇಂದು ಚೆನ್ನೈನಲ್ಲಿ ರೈಡರ್ಸ್ vs ರೈಸರ್ಸ್ ಫೈನಲ್ ಹಣಾಹಣಿ

May 26, 2024 - 10:29
 41
Google  News Join WhatsApp Join Telegram View ePaper

ಇಂದು ಚೆನ್ನೈನಲ್ಲಿ ರೈಡರ್ಸ್ vs ರೈಸರ್ಸ್ ಫೈನಲ್ ಹಣಾಹಣಿ

Panchayat Swaraj Samachar News Desk.

ಚೆನ್ನೈ: ಐಪಿಎಲ್ 2024ರ ಫೈನಲ್ ಪಂದ್ಯಕ್ಕೆ ಚೆನ್ನೈನ ಚೆಪಾಕ್ ಮೈದಾನ ಸಜ್ಜಾಗಿದ್ದು, ಈ ಬಾರಿ ಕಿರೀಟ ಯಾರ ಮುಡಿಗೇರಲಿದೆ ಎಂಬ ಕುತೂಹಲಕ್ಕೆ ಇಂದು ತೆರೆಬೀಳಲಿದೆ. 17ನೇ ಆವೃತ್ತಿಯ ಪ್ರಶಸ್ತಿ ತಮ್ಮದಾಗಿಸಿಕೊಳ್ಳಲು ಇಂದು ಕೋಲ್ಕತ್ತಾ ನೈಟ್ ರೈಡರ್ಸ್‌ ಮತ್ತು ಸನ್ ರೈಸರ್ಸ್ ಹೈದರಾಬಾದ್ ಮಧ್ಯೆ ರೋಚಕ ಕಾದಾಟ ನಡೆಯಲಿದೆ.

ಐಪಿಎಲ್ 2024ರ ಲೀಗ್ ಹಂತದ ಅಗ್ರ ಎರಡು ತಂಡಗಳಾಗಿರುವ ಕೆಕೆಆರ್ ಮತ್ತು ಎಸ್‌ಆರ್‌ಹೆಚ್, ಮತ್ತೊಮ್ಮೆ ರನ್ ಮಳೆ ಹರಿಸಲು ಸಜ್ಜಾಗಿವೆ. ಆದರೆ, ಚೆನ್ನೈನ ನಿಧಾನ ಗತಿಯ ಪಿಚ್ ಉಭಯ ತಂಡಗಳ ಸ್ಫೋಟಕ ಆಟಕ್ಕೆ ಹೇಗೆ ವರ್ತಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

ಅಹಮದಾಬಾದ್‌ನಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಎಸ್‌ಆರ್‌ಹೆಚ್ ತಂಡದ ವಿರುದ್ಧ ಗೆದ್ದ ಕೆಕೆಆರ್, ನೇರವಾಗಿ ಫೈನಲ್ ಪ್ರವೇಶಿಸಿತು. ಇದೇ ವೇಳೆ ಕೆಕೆಆರ್ ವಿರುದ್ಧ ಸೋತ ಸನ್‌ರೈಸರ್ಸ್, ಆ ಬಳಿಕ ಎರಡನೇ ಕ್ವಾಲಿಫೈಯರ್ ಕದನದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 36 ರನ್‌ಗಳಿಂದ ಗೆದ್ದು ಮತ್ತೆ ಕೆಕೆಆರ್ ತಂಡವನ್ನು ಎದುರಿಸಲು ಸಜ್ಜಾಗಿದೆ. ಶುಕ್ರವಾರವಷ್ಟೇ ಚೆಪಾಕ್ ಮೈದಾನದಲ್ಲಿ ರಾಜಸ್ಥಾನವನ್ನು ಸೋಲಿಸಿದ ಹೈದರಾಬಾದ್‌ಗೆ ಈ ಪಿಚ್ ಹೇಗೆ ವರ್ತಿಸುತ್ತದೆ ಎಂಬುದರ ಅರಿವಾಗಿದೆ. ಎರಡೂ ತಂಡಗಳ ಬ್ಯಾಟಿಂಗ್, ಬೌಲಿಂಗ್ ವಿಭಾಗ ಬಲಿಷ್ಟವಾಗಿದೆ.

ಫೈನಲ್ ಪಂದ್ಯಕ್ಕೂ ಮುನ್ನ ಅದ್ಧೂರಿ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದೆ. ಸಂಜೆ 6 ಗಂಟೆಗೆ ಕಾರ್ಯಕ್ರಮ ಪ್ರಾರಂಭಗೊಳ್ಳಲಿದ್ದು, ನಟ-ನಟಿಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

Google News Join Facebook Live 24/7 Help Desk

Tags: