ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ರಾಹುಲ್‌, ಪ್ರಿಯಾಂಕಾ

Jun 11, 2024 - 14:41
 29
Google  News Join WhatsApp Join Telegram View ePaper

ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ರಾಹುಲ್‌, ಪ್ರಿಯಾಂಕಾ

Panchayat Swaraj Samachar News Desk.

ಬೆಂಗಳೂರು: ಇಂದು ರಾತ್ರಿ ಬೆಂಗಳೂರಿಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಆಗಮಿಸಲಿದ್ದಾರೆ.

ಇಂದು ರಾತ್ರಿ ಬೆಂಗಳೂರಲ್ಲೇ ಇಬ್ಬರು ವಾಸ್ತವ್ಯ ಹೂಡಲಿದ್ದು ನಾಳೆ ಬೆಳಗ್ಗೆ ಬೆಂಗಳೂರಿನಿಂದ ಕೇರಳಕ್ಕೆ ತೆರಳಲಿದ್ದಾರೆ. ಸದ್ಯಕ್ಕೆ ಬೆಂಗಳೂರಿನಲ್ಲಿ ಯಾವುದೇ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮಾಹಿತಿ ಇಲ್ಲ.

ರಾತ್ರಿ 9 ಗಂಟೆಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ರಾಹುಲ್ ಮತ್ತು ಪ್ರಿಯಾಂಕಾ ಅವರನ್ನು ಬರಮಾಡಿಕೊಳ್ಳಲಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದು ನಾಳೆ ಬೆಳಗ್ಗೆ 7 ಗಂಟೆಗೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳಕ್ಕೆ ರಾಹುಲ್ ಮತ್ತು ಪ್ರಿಯಾಂಕಾ ಪ್ರಯಾಣಿಸಲಿದ್ದಾರೆ.

Google News Join Facebook Live 24/7 Help Desk

Tags: