ಇಂದು RCB vs RR, ಸೇಡು ತೀರಿಸಿಕೊಳ್ಳುತ್ತಾರಾ ಬೆಂಗಳೂರು ಬಾಯ್ಸ್?

May 22, 2024 - 08:32
 44
Google  News Join WhatsApp Join Telegram View ePaper

ಇಂದು RCB vs RR, ಸೇಡು ತೀರಿಸಿಕೊಳ್ಳುತ್ತಾರಾ ಬೆಂಗಳೂರು ಬಾಯ್ಸ್?

Panchayat Swaraj Samachar News Desk.

ಅಹಮದಾಬಾದ್: ಚೊಚ್ಚಲ ಐಪಿಎಲ್‌ ಆವೃತ್ತಿಯ ಚಾಂಪಿಯನ್‌ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ.

ಉಭಯ ತಂಡಗಳು ಇದುವರೆಗಿನ ಐಪಿಎಲ್ ಆವೃತ್ತಿಯಲ್ಲಿ ಒಟ್ಟು 31 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಆರ್ಸಿಬಿ 15, ರಾಜಸ್ಥಾನ್ 13 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 3 ಪಂದ್ಯಗಳು ಫಲಿತಾಂಶ ಇಲ್ಲದೇ ರದ್ದಾಗಿದೆ. ರಾಜಸ್ಥಾನ್‌ ರಾಯಲ್ಸ್‌ ಚೊಚ್ಚಲ ಆವೃತ್ತಿಯಲ್ಲೇ ಟ್ರೋಫಿ ಗೆದ್ದು ಮಾಜಿ ಚಾಂಪಿಯನ್‌ ಎನ್ನಿಸಿಕೊಂಡಿದ್ದರೆ ಮೂರು ಬಾರಿ ಫೈನಲ್‌ ಪ್ರವೇಶಿಸಿದ್ದ ಆರ್‌ಸಿಬಿ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ.

ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2022ರಲ್ಲಿ ನಡೆದಿದ್ದ ಐಪಿಎಲ್ ಟೂರ್ನಿಯ ಕ್ವಾಲಿಫೈಯರ್-2 ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲೇ ನಡೆದಿತ್ತು. ಪಂದ್ಯದಲ್ಲಿ ರಾಜಸ್ಥಾನ್ 7 ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿತ್ತು. ಇದೀಗ ಅಂದಿನ ಈ ಸೋಲಿಗೆ ಆರ್ಸಿಬಿ ಈ ಬಾರಿಯ ಎಲಿಮಿನೇಟರ್ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

Google News Join Facebook Live 24/7 Help Desk

Tags: