ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ

Apr 8, 2024 - 19:37
 116
Google  News Join WhatsApp Join Telegram View ePaper

ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ

Panchayat Swaraj Samachar News Desk.

ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶ ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಗೊಂಡಿದೆ. ಅದರಂತೆ, ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾವೇಶ ನಡೆಯಲಿದೆ. ಈ ಮೊದಲು ಏಪ್ರಿಲ್ 14 ರಂದು ದೇವನಹಳ್ಳಿಯಲ್ಲಿ ಸಮಾವೇಶ ನಿಗದಿಯಾಗಿತ್ತು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಸಾರ್ವಜನಿಕ ಸಮಾವೇಶ ಇದೀಗ ಮಂಗಳೂರಿಗೆ ಸ್ಥಳಾಂತರಗೊಂಡಿದೆ.

ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ಸಂಜೆ ಬೆಂಗಳೂರಿನಲ್ಲಿ ರೋಡ್ ಶೋದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 6ರಿಂದ 7 ಗಂಟೆಯವರೆಗೆ ಹೆಬ್ಬಾಳ-ಬ್ಯಾಟರಾಯನಪುರದಲ್ಲಿ ರೋಡ್ ಶೋ ನಡೆಯಲಿದೆ.

ಕರ್ನಾಟಕದ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಜೊತೆ ಕಳೆದ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದ ಪ್ರಧಾನಿ ಮೋದಿ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದ ಸಲಹೆ ಸೂಚನೆಗಳನ್ನು ನೀಡಿದ್ದರು. ಬೂತ್ ಮಟ್ಟದಲ್ಲಿ ಚುನಾವಣಾ ಪ್ರಚಾರ ಯಾವ ರೀತಿಯಲ್ಲಿ ಸಾಗುತ್ತಿದೆ ಎಂಬುದನ್ನು ವಿಚಾರಿಸಿದ್ದರು. ಇದೀಗ ಖುದ್ದು ರಾಜ್ಯಕ್ಕೆ ಭೇಟಿ ನೀಡಿ ಪ್ರಚಾರ ಕಾರ್ಯಕ್ಕೆ ವೇಗ ನೀಡಲಿದ್ದಾರೆ.

Google News Join Facebook Live 24/7 Help Desk

Tags: