ಜನಾರ್ದನ ರೆಡ್ಡಿ ಬಿಜೆಪಿಗೆ ಮರಳಿರುವುದು ಒಂದು ದೊಡ್ಡ ಶಕ್ತಿ ಬಂದಂತೆ

Mar 25, 2024 - 15:50
 32
Google  News Join WhatsApp Join Telegram Live

ಜನಾರ್ದನ ರೆಡ್ಡಿ ಬಿಜೆಪಿಗೆ ಮರಳಿರುವುದು ಒಂದು ದೊಡ್ಡ ಶಕ್ತಿ ಬಂದಂತೆ

Panchayat Swaraj Samachar News Desk.

ಬೆಂಗಳೂರು: ಜನಾರ್ದನ ರೆಡ್ಡಿ ಮರಳಿದ್ದು ಬಿಜೆಪಿಗೆ ದೊಡ್ಡ ಶಕ್ತಿ ಬಂದಂತಾಗಿದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಕ್ಕೆ ಐತಿಹಾಸಿಕ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರೆಡ್ಡಿ ಅವರು ಬಿಜೆಪಿ ಜೊತೆ ತಮ್ಮ ಪಕ್ಷವನ್ನು ವಿಲೀನ ಮಾಡಿದ್ದಾರೆ. ಜನಾರ್ದನ ರೆಡ್ಡಿಯವರ ಪತ್ನಿ ಅರುಣ ಲಕ್ಷ್ಮಿ, ಮಾಜಿ ಸಚಿವ ಟಿ.ಜಾನ್ ಅವರ ಪುತ್ರ ಡಾ.ಥಾಮಸ್ ಜಾನ್ ಅವರೂ ಬಿಜೆಪಿ ಸೇರಿಸುವುದು ಸಂತಸ ತಂದಿದೆ ಎಂದರು.

ಜನಾರ್ದನ ರೆಡ್ಡಿ ತಮ್ಮ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದ್ದಾರೆ. ಇದರಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ದೊಡ್ಡ ಶಕ್ತಿ ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಮಂತ್ರಿಯಾಗಿ ಮಾಡುವ ದೃಷ್ಟಿಯಿಂದ ಅವರು ಬಿಜೆಪಿ ಸೇರಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ. ಮುಂದಿನ ಲೋಕಸಭಾ ಚುನಾವಣೆಯು ದೇಶದ ಭವಿಷ್ಯ ರೂಪಿಸಲಿದೆ. ಪಕ್ಷದ ಹಿತದೃಷ್ಟಿ, ಏಳಿಗೆಗಾಗಿ ಎಲ್ಲರನ್ನೂ ತೊಡಗಿಸಿಕೊಳ್ಳಲಿದ್ದೇವೆ ಎಂದು ತಿಳಿಸಿದರು. 

Google News Join Facebook Live 24/7 Help Desk

Tags: