ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂದು INDIA ಒಕ್ಕೂಟದ ಒಗ್ಗಟ್ಟು ಪ್ರದರ್ಶನ

Mar 31, 2024 - 10:18
 13
Google  News Join WhatsApp Join Telegram Live

ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂದು INDIA ಒಕ್ಕೂಟದ ಒಗ್ಗಟ್ಟು ಪ್ರದರ್ಶನ

Panchayat Swaraj Samachar News Desk.

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆ ಒಂದು ಕಡೆ ಪ್ರಧಾನಿ ಮೋದಿ ಅಬ್ಬರದ ಪ್ರಚಾರ ಶುರುಮಾಡಿದ್ದರೆ ಮತ್ತೊಂದೆಡೆ ರಾಷ್ಟ್ರರಾಜಧಾನಿಯಲ್ಲಿ ವಿಪಕ್ಷಗಳು ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಖಂಡಿಸಿ ‘ಲೋಕತಂತ್ರ ಬಚಾವೋ’ ಹೆಸರಿನಲ್ಲಿ ಇಂಡಿಯಾ ಒಕ್ಕೂಟ ಬೃಹತ್ ಸಮಾವೇಶ ಹಾಗೂ ರ‍್ಯಾಲಿ ನಡೆಸಲಿದೆ. ಪ್ರತಿಭಟನಾ ಸಮಾವೇಶದಲ್ಲಿ ಕಾಂಗ್ರೆಸ್ ಸೇರಿ 28 ವಿಪಕ್ಷಗಳ ನಾಯಕರು ಭಾಗಿಯಾಗುವ ಸಾಧ್ಯತೆಯಿದೆ.

ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ನಾಯಕರು ಕೇಂದ್ರ ಸರ್ಕಾರ, ಇಡಿ, ಐಟಿ, ಸಿಬಿಐ ವಿರುದ್ಧ ವಾಗ್ದಾಳಿ ನಡೆಸಲಿದ್ದಾರೆ. ಅಲ್ಲದೇ ಪ್ರತಿಭಟನೆ ಮೂಲಕ ಮೋದಿ ಸರ್ಕಾರದ ವಿರುದ್ಧ ಒಗ್ಗಟ್ಟು ಪ್ರದರ್ಶನ ಮಾಡಲಿದ್ದಾರೆ. ಈ ಸಮಾವೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಇತರೆ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ವರದಿಗಳು ತಿಳಿಸಿವೆ.

Google News Join Facebook Live 24/7 Help Desk

Tags: