ಪಕ್ಷ ಮೊದಲು ನಂತರ ಕುಟುಂಬ: ಮಂಗಳಾ ಅಂಗಡಿ

Mar 31, 2024 - 00:05
 39
Google  News Join WhatsApp Join Telegram Live

ಪಕ್ಷ ಮೊದಲು ನಂತರ ಕುಟುಂಬ: ಮಂಗಳಾ ಅಂಗಡಿ

Panchayat Swaraj Samachar News Desk.

ಬೆಳಗವಿ: ಪಕ್ಷದ ನಿರ್ಧಾರಕ್ಕೆ ನಾನು ಬದ್ಧ. ನಮ್ಮ ಕುಟುಂಬ ಯಾವತ್ತೂ ಬಿಜೆಪಿ ಸಿದ್ಧಾಂತ ನಂಬಿ ರಾಜಕೀಯ ಮಾಡಿದೆ. ಸುರೇಶ್ ಅಂಗಡಿಯವರು ಸಹ ಬದುಕಿನುದ್ದಕ್ಕೂ ಬಿಜೆಪಿ ತತ್ವದಂತೆ ಬದುಕಿದ ಧೀಮಂತ ರಾಜಕಾರಣಿ ಆಗಿದ್ದರು. ಅವರ ನಂತರ ಪಕ್ಷ ನನಗೆ ಅವಕಾಶ ಕೊಟ್ಟಿತ್ತು. ಈ ಬಾರಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡುವುದಾಗಿ ವರಿಷ್ಠರು ಹೇಳಿದ ತಕ್ಷಣ ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತಳಾಗಿ ಸಂತೋಷದಿಂದ ಒಪ್ಪಿಕೊಂಡೆ ಎಂದು ಮಾಜಿ ಸಂಸದೆ ಮಂಗಳಾ ಅಂಗಡಿ ಹೇಳಿದರು. 

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜನರ ಮನಸಿನಲ್ಲಿ ಸಂಶಯ ಹುಟ್ಟಿಸುವ ಕ್ಷುಲ್ಲಕ ಹೇಳಿಕೆ ಕೊಡುವ ಬದಲು ಸಚಿವ ಸ್ಥಾನಕ್ಕೆ ಗೌರವ ತರುವ ಮಾತು ಆಡಬೇಕು. ಅಷ್ಟಕ್ಕೂ ಕಾಂಗ್ರೆಸ್ ಪಕ್ಷದ ಸಂಸ್ಕೃತಿಯಂತೆ ಕೇವಲ ಕ್ಷುಲ್ಲಕ ವಿಷಯದ ರಾಜಕಾರಣ ಮಾಡುತ್ತಿರುವ ಲಕ್ಷ್ಮಿ ಹೆಬ್ಬಾಳ್ಕರ್, ಇನ್ನುಮುಂದಾದರೂ ರಾಷ್ಟ್ರದ ಅಭಿವೃದ್ಧಿ, ರಾಷ್ಟ್ರೀಯತೆ, ಕರ್ನಾಟಕದ ಅಭಿವೃದ್ಧಿ ಹಾಗೂ ಬೆಳಗಾವಿ ಲೋಕ ಸಭಾ ಕ್ಷೇತ್ರದ ಜನರ ಬೇಕು ಬೇಡಿಕೆಗಳ ಬಗ್ಗೆ ಹೆಚ್ಚು ಬೆಳಕು ಚೆಲ್ಲಿದರೆ ಜನರ ಬದುಕು ಹಸನುಗೊಳಿಸುವ ಕೆಲಸ ಆದೀತು. ಟಿಕೆಟ್ ಕಿತ್ತುಕೊಂಡಿದ್ದಾರೆ ಎಂಬಂತಹ ಕ್ಷುಲ್ಲಕ ಹೇಳಿಕೆಗಳಿಗೆ ನಾನು ಪ್ರಜ್ಞಾವಂತ ಪ್ರಜೆಯಾಗಿ ಉತ್ತರಿಸಲಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜಿಲ್ಲೆಯ ಹಿರಿಯ ರಾಜಕಾರಣಿಗಳನ್ನು ಬದಿಗೊತ್ತಿ ಎರಡನೇ ಸಲ ಶಾಸಕಿ ಆಗುತ್ತಲೇ ಸಚಿವೆಯೂ ಆಗಿದ್ದೀರಿ. ಜಿಲ್ಲೆಯಲ್ಲಿ ನಿಮಗಿಂತ ಹಿರಿಯರಾದ ಮಹಾಂತೇಶ್ ಕೌಜಲಗಿ, ಅಶೋಕ್ ಪಟ್ಟಣ ಅವರಿಂದ ಸಚಿವ ಸ್ಥಾನ ಕಿತ್ತುಕೊಂಡವರು ನೀವು. ಆದರೆ ಈ ವಿಷಯವನ್ನು ಈವರೆಗೆ ನಾವು ಪ್ರಸ್ತಾಪ ಮಾಡಿರಲಿಲ್ಲ. ಜಿಲ್ಲೆಯ ಜನರಿಗೆ ಈ ವಿಷಯ ಚೆನ್ನಾಗಿದೆ ಗೊತ್ತಿದೆ. ಆದ್ದರಿಂದ ಇನ್ನುಮುಂದೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ವೈಯಕ್ತಿಕ ವಿಚಾರ ಬಿಟ್ಟು ಸಮಷ್ಟಿ ಪ್ರಜ್ಞೆ ಯಿಂದ ರಾಜಕೀಯ ಮಾಡುವುದನ್ನು ರೂಡಿ ಮಾಡಿಕೊಳ್ಳುವುದು ಒಳಿತು. 

Google News Join Facebook Live 24/7 Help Desk

Tags: