ಬಿಜೆಪಿ ಚುನಾವಣಾ ಚಾಣಕ್ಯ ಅಖಾಡಕ್ಕೆ; ಏ.2ರಂದು ಅಮಿತ್ ಶಾ ರಾಜ್ಯ ಪ್ರವಾಸ

Mar 31, 2024 - 00:22
 27
Google  News Join WhatsApp Join Telegram Live

ಬಿಜೆಪಿ ಚುನಾವಣಾ ಚಾಣಕ್ಯ ಅಖಾಡಕ್ಕೆ; ಏ.2ರಂದು ಅಮಿತ್ ಶಾ ರಾಜ್ಯ ಪ್ರವಾಸ

Panchayat Swaraj Samachar News Desk.

ಬೆಂಗಳೂರು: ಕೇಂದ್ರ ಗೃಹಸಚಿವ ಅಮಿತ್ ಶಾ ಏಪ್ರಿಲ್ 2 ರಂದು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. ಅಂದು ರಾಜ್ಯಾದ್ಯಂತ ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ನಡೆಯುವ ಬೃಹತ್ ಸಮಾವೇಶಗಳಲ್ಲಿಯೂ ಭಾಗಿಯಾಗಲಿದ್ದಾರೆ.

ಏಪ್ರಿಲ್ 2ರಂದು ಬೆಳಗ್ಗೆ 9 ಗಂಟೆಗೆ ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ ನಡೆಯಲಿದೆ. ಬಳಿಕ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶದಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ಸಾಧ್ಯತೆಯಿದೆ ಎಂದು ಬಿಜೆಪಿ ಹೇಳಿಕೊಂಡಿದೆ.

ಸಮಾವೇಶದ ಬಳಿಕ ಮಧ್ಯಾಹ್ನ 2 ಗಂಟೆಯಿಂದ 4 ಲೋಕಸಭಾ ಕ್ಷೇತ್ರಗಳ ಪ್ರಮುಖರ ಜೊತೆ ಸಭೆ ನಡೆಸಲಿದ್ದಾರೆ. ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಕ್ಷೇತ್ರದ ಪ್ರಮುಖರ ಜೊತೆ ಸಭೆ ನಡೆಸಲಿದ್ದಾರೆ. ಬಳಿಕ ಚನ್ನಪಟ್ಟಣಕ್ಕೆ ತೆರಳಲಿರೋ ಅಮಿತ್ ಶಾ, ಸಂಜೆ 6 ಗಂಟೆಗೆ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಪರವಾಗಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಬಳಿಕ ಅಲ್ಲಿಯೇ ನಡೆಯುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

Google News Join Facebook Live 24/7 Help Desk

Tags: