ಬೆಂಗಳೂರು ಗ್ರಾಮಾಂತರದಲ್ಲಿ ಮಂಜುನಾಥ್ 5 ಲಕ್ಷ ಮತಗಳ ಅಂತರದಿಂದ ಗೆಲ್ತಾರೆ:-ಅಮಿತ್ ಶಾ ಭವಿಷ್ಯ

Apr 2, 2024 - 22:08
 40
Google  News Join WhatsApp Join Telegram Live

ಬೆಂಗಳೂರು ಗ್ರಾಮಾಂತರದಲ್ಲಿ ಮಂಜುನಾಥ್ 5 ಲಕ್ಷ ಮತಗಳ ಅಂತರದಿಂದ ಗೆಲ್ತಾರೆ:-ಅಮಿತ್ ಶಾ ಭವಿಷ್ಯ

Panchayat Swaraj Samachar News Desk.

ಅಮಿತ್ ಶಾ ಅವರು ಡಿಕೆ ಬ್ರದರ್ಸ್ ಅವರ ಕೋಟೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಲೋಕಸಭಾ ಚುನಾವಣಾ ಪ್ರಚಾರ ಆರಂಭಿಸಿದ್ದು, ಮೈತ್ರಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಪರವಾಗಿ ಇಂದು (ಏಪ್ರಿಲ್ 2) ಚನ್ನಪಟ್ಟಣದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. 

ಈ ವೇಳೆ ಮಾತನಾಡಿ ನಾನು ಕರ್ನಾಟಕದ ಜನರಿಗೆ ಮನವಿ ಮಾಡಲು ಬಂದಿದ್ದೇನೆ. ಕರ್ನಾಟಕದ 28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿ- ಜೆಡಿಎಸ್ ಖಾತೆಗೆ ನೀಡಿ. ತೆನೆ ಹೊತ್ತ ಮಹಿಳೆ ಹಾಗೂ ಕಮಲಕ್ಕೆ ವೋಟ್ ನೀಡಿದರೆ ನೀವು ಮೋದಿಗೆ ಶಕ್ತಿ ‌ನೀಡಿದಂತೆ. ಈ ಬಾರಿ 400ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲುವ ಗುರಿ ಇದೆ. ಇನ್ನು ಡಾ.ಸಿ.ಎನ್ ಮಂಜುನಾಥ ಅವರು 5 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನರೇಂದ್ರ ಮೋದಿ ಅವರು ಪ್ರಧಾನಿ ಆದ ಮೇಲೆ ಆರ್ಥಿಕತೆಯಲ್ಲಿ 11ರಲ್ಲಿದ್ದ‌ ಭಾರತವನ್ನು 5ನೇ ಸ್ಥಾನಕ್ಕೆ ತಂದಿದ್ದಾರೆ. ಅದೇ ರೀತಿಯಾಗಿ ಈಗಲೂ ಅವರನ್ನು ಗೆಲ್ಲಿಸಿದರೆ‌ 3ನೇ‌ ಸ್ಥಾನಕ್ಕೆ ತೆಗೆದುಕೊಂಡು ಹೋಗುತ್ತಾರೆ. ಆ ನಿಟ್ಟಿನಲ್ಲಿ ಅವರು ಕಾರ್ಯೋನ್ಮುಖರಾಗಿದ್ದಾರೆ. ಮೋದಿ ಅವರು ಕಳೆದ ಹತ್ತು ವರ್ಷಗಳಲ್ಲಿ ದೇಶವನ್ನು ಸುರಕ್ಷಿತವಾಗಿ ಇಟ್ಟಿದ್ದಾರೆ. ಹೀಗಾಗಿ ದೇಶದ ಜನರು ಮೋದಿ ಪರವಾಗಿ ಇದ್ದಾರೆ. ಇಂದಿನ ರೋಡ್ ಶೋ ನೋಡಿದರೆ ನಮ್ಮ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಅವರು ಐದು ಲಕ್ಷ ಮತಗಳಿಂದ ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸ ನನಗೆ ಮೂಡಿದೆ. ಹೀಗಾಗಿ ರಾಜ್ಯದಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮನವಿ ಮಾಡಲು ಬಂದಿದ್ದೇನೆ. ನೀವು ಹಾಕುವ ಮತ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂದರು.

Google News Join Facebook Live 24/7 Help Desk

Tags: