ಬೆಳಗಾವಿ ಬಿಜೆಪಿಯಲ್ಲಿ ಧಗ ಧಗ ಹತ್ತಿ ಉರಿಯುತ್ತಿದ್ದ ಬೆಂಕಿಯನ್ನು ನೊಂದಸಿದ ಬಿಎಸ್ ಯಡಿಯೂರಪ್ಪ

Mar 27, 2024 - 14:33
 104
Google  News Join WhatsApp Join Telegram Live

ಬೆಳಗಾವಿ ಬಿಜೆಪಿಯಲ್ಲಿ  ಧಗ ಧಗ ಹತ್ತಿ ಉರಿಯುತ್ತಿದ್ದ  ಬೆಂಕಿಯನ್ನು ನೊಂದಸಿದ ಬಿಎಸ್ ಯಡಿಯೂರಪ್ಪ

Panchayat Swaraj Samachar News Desk.

ಬೆಳಗಾವಿ: ಲೋಕಸಭಾ ಮತಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್ ಅವರ ಹೆಸರು ಘೋಷಣೆ ಆದ ನಂತರ ಬೆಳಗಾವಿ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಎದ್ದಿತ್ತು. ಕಾರ್ಯಕರ್ತರು ಜಗದೀಶ್ ಶೆಟ್ಟರ ವಿರುದ್ಧ ನೇರ ಆಕ್ರೋಶವನ್ನು ಹೊರ ಹಾಕುವದ ಅಲ್ಲದೆ ಟಿಕೆಟ್ ಆಕಾಂಕ್ಷಿ ನಾಯಕರಗಳಲ್ಲಿ ಕೂಡ ಜಗದೀಶ್ ಶೆಟ್ಟರ್ ಬೆಳಗಾವಿಗೆ ಬರಬಾರದು ಎಂದು ಕೊನೆಯವರೆಗೂ ಹೋರಾಟವನ್ನು ಮಾಡಿದ್ದರು. ಆದರೆ ಈ ಹೋರಾಟ ಶಮನ ಮಾಡಲು ಮಾಜಿ ಮುಖ್ಯಮಂತ್ರಿ ಹಾಗೂ ಭಾರತೀಯ ಜನತಾ ಪಕ್ಷದ ಮುಖಂಡರಾದ ಬಿಎಸ್ ಯಡಿಯೂರಪ್ಪನವರೇ ಬೆಳಗಾವಿಗೆ ಸ್ವತಃ ಬರಬೇಕಾಯಿತು.

ಮಂಗಳವಾರ ರಾತ್ರಿ ಬೆಳಗಾವಿಗೆ ಬಂದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸ್ಥಳೀಯ ನಾಯಕರಗಳ ಜೊತೆ ಅನೇಕ ಸುತ್ತಿನ ಮಾತುಕತೆ ನಡೆಸಿ ಬೆಳಗಾವಿ ಬಿಜೆಪಿ ತೆರೆಮರೆಯಲ್ಲಿ ಸಂಧಾನ ರಾಜಿ ಸೂತ್ರವನ್ನು ರೆಡಿ ಮಾಡಿದ್ದಾರೆ.

 ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗಬೇಕಾಗಿದ್ದ ಬೈಕ್ ರೈಲಿ ಒಂದು ಗಂಟೆಗಳ ಕಾಲ ತಡವಾಗಿ ಪ್ರಾರಂಭವಾಯಿತು. ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಬೆಳಗಾವಿ ಕೋಟೆಯವರಣದಲ್ಲಿರುವ ದುರ್ಗಾ ಮಾತಾ ಮಂದಿರದಲ್ಲಿ ಪೂಜೆ ಸಲ್ಲಿಸಿ ಅಶೋಕ್ ವೃತ್ತಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸರ್ಕಲ್, ಕೋರ್ಟ್ ಅವರ ವೀರ ರಾಣಿ ಕಿತ್ತೂರು ಚೆನ್ನಮ್ಮ ಸರ್ಕಲ್ ಹಾಗೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಉದ್ಯಾನವನಕ್ಕೆ ತರಳಿ ಗೌರವನಮನ ಸಲ್ಲಿಸಿದರು.

  ಇದೆ ವೇಳೆ ಬಿಜೆಪಿ ಅಭ್ಯರ್ಥಿ ಜಗ್ಗೇಶ್ ಶೆಟ್ಟರ್ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಬೆಳಗಾವಿ ಎಲ್ಲ ನಾಯಕರಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಧಾನವನ್ನು ಯಶಸ್ವಿಯಾಗಿ ಮಾಡಿದ್ದಾರೆ. 

 ಬಹಿರಂಗವಾಗಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಬೈಕ್ ರಾಲಿಯಲ್ಲಿ ಬಿಜೆಪಿ ಅನೇಕ ನಾಯಕರಗಳು ಉಪಸ್ಥಿತರಿದ್ದರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಅನಿಲ ಬೆನಕೆ ಬೆಳಗಾವಿ ಲೋಕಸಭಾ ಸಂಸದರಾದ ಮಂಗಳ ಅಂಗಡಿ, ರಾಜ್ಯಸಭಾ ಸದಸ್ಯರಾದ ವೀರಣ್ಣ ಕಡಾಡಿ, ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಭಯ್ ಪಾಟೀಲ್, ಬೆಳಗಾವಿ ಗ್ರಾಮೀಣ ಬಿಜೆಪಿ ಅಧ್ಯಕ್ಷರಾದ ಸುಭಾಷ್ ಪಾಟೀಲ್, ನಗರ ಅಧ್ಯಕ್ಷರಾದ ಗೀತಾ ಸುತಾರ್ ಹಾಗೂ ಪಕ್ಷದ ಮಹಿಳಾ ಪದಾಧಿಕಾರಿಗಳು ಹಾಗೂ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Google News Join Facebook Live 24/7 Help Desk

Tags: