ಮತಬ್ಯಾಂಕ್​ಗೆ ಹೆದರಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಬಾರದ ಕಾಂಗ್ರೆಸ್ ನಾಯಕರು: ಅಮಿತ್

Apr 2, 2024 - 15:45
 28
Google  News Join WhatsApp Join Telegram Live

ಮತಬ್ಯಾಂಕ್​ಗೆ ಹೆದರಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಬಾರದ ಕಾಂಗ್ರೆಸ್ ನಾಯಕರು: ಅಮಿತ್

Panchayat Swaraj Samachar News Desk.

ನವದೆಹಲಿ: ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಲ್ಲರಿಗೂ ಆಹ್ವಾನವಿತ್ತು. ಆದರೆ, ಮತ ಬ್ಯಾಂಕ್ ಹೋಗಿ ಬಿಡುತ್ತದೆ ಎಂಬ ಭಯದಿಂದ ಅವರು ಬರಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. 

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿಯ ಐದು ಲೋಕಸಭಾ ಕ್ಷೇತ್ರಗಳ ಶಕ್ತಿ ಕೇಂದ್ರ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಹಾಗೂ ಹಿಂದಿನ ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಯುಪಿಎ ಅಧಿಕಾರದಲ್ಲಿದ್ದಾಗ ದೇಶದ ಆರ್ಥಿಕತೆ 11 ನೇ ಸ್ಥಾನದಲ್ಲಿ ಇತ್ತು, ಈಗ 5 ನೇ ಸ್ಥಾನಕ್ಕೆ ಬಂದಿದೆ. ಈಗ ಮತ್ತೆ ಮೋದಿ ಗೆಲ್ಲಿಸಿದರೆ ದೇಶ 3 ನೇ ಅತಿ ದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಅವರು ಪ್ರತಿಪಾದಿಸಿದರು.

Google News Join Facebook Live 24/7 Help Desk

Tags: