ಯಶವಂತಪುರ ಶಾಸಕ ಎಸ್ಟಿ ಸೋಮಶೇಖರ್ ಬಿಜೆಪಿಯಲ್ಲಿಲ್ಲ: ಆರ್ ಅಶೋಕ್

Apr 5, 2024 - 16:05
 123
Google  News Join WhatsApp Join Telegram View ePaper

ಯಶವಂತಪುರ ಶಾಸಕ ಎಸ್ಟಿ ಸೋಮಶೇಖರ್ ಬಿಜೆಪಿಯಲ್ಲಿಲ್ಲ: ಆರ್ ಅಶೋಕ್

Panchayat Swaraj Samachar News Desk.

ಬೆಂಗಳೂರು: ಯಶವಂತಪುರ ಶಾಸಕ ಎಸ್ಟಿ ಸೋಮಶೇಖರ್ ಬಿಜೆಪಿಯಲ್ಲಿ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೋಮಶೇಖರ್ ಕಾಲು ಹೊರಗಡೆ ಹಾಕಿದ್ದಾರೆ. ಅವರು ಕಾಂಗ್ರೆಸ್ನವರ ಸಂಪರ್ಕದಲ್ಲಿ ಇದ್ದಾರೆ. ಅವರ ವಿರುದ್ಧ ಬಿಜೆಪಿ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ವಿರುದ್ಧ ಸೋಮಶೇಖರ್ ಮತ ಹಾಕಿದ್ದಾರೆ. ಅವರು ಆಗಲೇ ಬಿಜೆಪಿಯಿಂದ ಕಾಲು ಹೊರಗಿಟ್ಟಿದ್ದರು ಎಂದು ಅಶೋಕ್ ಹೇಳಿದ್ದಾರೆ.

ಸಂಸದೆ ಸುಮಲತಾ ಪ್ರಭಾವ ಬಳಸಿಕೊಂಡು ಮಂಡ್ಯ, ಮೈಸೂರು ಗೆಲ್ಲುತ್ತೇವೆ ಎಂದು ಅಶೋಕ್ ಭರವಸೆ ವ್ಯಕ್ತಪಡಿಸಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾಗೆ ಬೆಂಬಲ ನೀಡಿದ್ದೆವು. ಈ ಬಾರಿ ಚುನಾವಣಾ ಪ್ರಚಾರಕ್ಕೆ ಸಂಸದೆ ಸುಮಲತಾರನ್ನು ಬಳಸಿಕೊಳ್ಳುತ್ತೇವೆ. ಈಗಾಗಲೇ ಕೇಂದ್ರ ನಾಯಕರ ಜೊತೆ ಸುಮಲತಾ ಮಾತನಾಡಿದ್ದಾರೆ ಎಂದು ಅವರು ತಿಳಿಸಿದರು.

ಬೀದರ್ನಲ್ಲಿ ಅಸಮಾಧಾನ ಶಮನವಾಗಿದೆ, ಎಲ್ಲರೂ ಒಗ್ಗಟ್ಟಾಗಿದ್ದೇವೆ. ರಾಜ್ಯದ ಎಲ್ಲಾ ಕಡೆ ಸಮನ್ವಯ ಸಮಿತಿ‌ ಸಭೆ ಮಾಡುತ್ತಿದ್ದೇವೆ. ಜೆಡಿಎಸ್ ಹಾಗೂ ಬಿಜೆಪಿ ಹಾಲು ಜೇನಿನಂತೆ ಒಗ್ಗೂಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

Google News Join Facebook Live 24/7 Help Desk

Tags: