ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ – ವಯನಾಡ್ನಿಂದಲೇ ಸ್ಪರ್ಧೆ
Google News | Join WhatsApp | Join Telegram | Live |
Panchayat Swaraj Samachar News Desk.
ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ನ ಯುವರಾಜ ರಾಹುಲ್ ಗಾಂಧಿ ಕೇರಳದ ವಯನಾಡ್ನಿಂದ ಎರಡನೇ ಬಾರಿಗೆ ಸ್ಪರ್ಧೆಗಿಳಿದಿದ್ದಾರೆ. ಕಳೆದ ಬಾರಿ ನಾಲ್ಕು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದ ಅವರು ಈಗ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದು ಇಂದು ಚುನಾವಣೆ ಸ್ಪರ್ಧೆಗೆ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಕಾರ್ಯಕರ್ತರು, ಬೆಂಬಲಿಗರ ಸಮೂಹದಲ್ಲಿ ವಯನಾಡಿನ ಕಲ್ಪೆಟ್ಟಾದಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ, ಕೆಸಿ ವೇಣುಗೋಪಾಲ್, ಕೇರಳದ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಹಂಗಾಮಿ ಅಧ್ಯಕ್ಷ ಎಂಎಂ ಹಾಸನ್, ಪಕ್ಷದ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಸೇರಿದಂತೆ ಇತರ ರಾಜ್ಯ ನಾಯಕರು ಸಾಥ್ ನೀಡಿದರು.
ಬೃಹತ್ ರೋಡ್ ಶೋ ಉದ್ದೇಶಿಸಿ ಮಾತನಾಡಿದ ಅವರು ಸಂಸತ್ನಲ್ಲಿ ವಯನಾಡ್ ಪ್ರತಿನಿಧಿಸುವುದು ಗೌರವ ತಂದಿದೆ. ನಾನು ಚುನಾಯಿತ ಪ್ರತಿನಿಧಿಯಲ್ಲ. ನಾನು ನಿಮ್ಮ ಕುಟುಂಬ ಸದಸ್ಯನಂತೆ. ನನ್ನ ಸಹೋದರಿ ಪ್ರಿಯಾಂಕಾ ಗಾಂಧಿಯನ್ನು ಹೇಗೆ ನೋಡುತ್ತೇನೆ ಹಾಗೇಯೇ ನಾನು ನಿಮ್ಮನ್ನು ನೋಡುತ್ತೇನೆ. ಹೀಗಾಗೀ ಕ್ಷೇತ್ರದಲ್ಲಿ ತಂದೆ-ತಾಯಿ ಸಹೋದರಿಯರಿದ್ದಾರೆ ಎಂದರು.
Google News | Join Facebook | Live | 24/7 Help Desk |