ವಿಚ್ಛೇದನದ ಬಳಿಕವೂ ಒಟ್ಟಾಗಿ ಸುದ್ದಿಗೋಷ್ಠಿ ಕರೆದ ಚಂದನ್-ನಿವೇದಿತಾ; ಇಲ್ಲಿದೆ ವಿವರ

Jun 10, 2024 - 11:44
 5
Google  News Join WhatsApp Join Telegram View ePaper

ವಿಚ್ಛೇದನದ ಬಳಿಕವೂ ಒಟ್ಟಾಗಿ ಸುದ್ದಿಗೋಷ್ಠಿ ಕರೆದ ಚಂದನ್-ನಿವೇದಿತಾ; ಇಲ್ಲಿದೆ ವಿವರ

Panchayat Swaraj Samachar News Desk.

ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನದ ವಿಚಾರ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದೆ. ಕಳೆದ ಒಂದು ವರ್ಷಗಳಿಂದ ಇವರು ಈ ಬಗ್ಗೆ ಚರ್ಚೆ ಮಾಡುತ್ತಿದ್ದರು. ಆದರೆ ಎಲ್ಲಿಯೂ ಸುದ್ದಿ ಲೀಕ್ ಆಗೋಕೆ ಬಿಟ್ಟಿರಲಿಲ್ಲ. ಈಗ ಏಕಾಏಕಿ ಇವರು ಬೇರೆ ಆಗುವ ನಿರ್ಧಾರ ಘೋಷಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪರಸ್ಪರ ಅನ್ಫಾಲೋ ಮಾಡಿಕೊಂಡಿದ್ದಾರೆ. ಈಗ ಇಬ್ಬರೂ ಜಂಟಿಯಾಗಿ ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಮೂಲಕ ಹಲವು ವದಂತಿಗೆ ಇವರು ತೆರೆ ಎಳೆಯಲಿದ್ದಾರೆ

ಚಂದನ್ ಶೆಟ್ಟಿ ಹಾಗೂ ನಿವೇದಿತಾ ದಾಂಪತ್ಯಕ್ಕೆ ಈಗ ನಾಲ್ಕು ವರ್ಷ. ಇವರು ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದರು. ಆದರೆ, ಈಗ ಇವರು ಬೇರೆ ಆಗುತ್ತಿದ್ದಾರೆ. ಇದಕ್ಕೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ಮಧ್ಯೆ ಇವರು ಬೇರೆ ಆಗುತ್ತಿರುವ ಬಗ್ಗೆ ಸಾಕಷ್ಟು ವದಂತಿಗಳು ಹರಿದಾಡಿದ್ದವು. ಮಗು ಪಡೆಯಲು ಒಪ್ಪದ್ದಕ್ಕೆ ನಿವೇದಿತಾ ವಿಚ್ಛೇದನ ಪಡೆದರು, ನಟಿಯಾಗಿ ಮುಂದುವರಿಯಬೇಕು ಎಂಬುದಕ್ಕೆ ಗಂಡನಿಂದ ದೂರ ಆಗುತ್ತಿದ್ದಾರೆ ಎಂಬಿತ್ಯಾದಿ ಮಾತುಗಳು ಕೇಳಿ ಬಂದವು. ಇದಕ್ಕೆಲ್ಲ ಸುದ್ದಿಗೋಷ್ಠಿಯಲ್ಲಿ ಇವರು ಸ್ಪಷ್ಟನೆ ನೀಡಲಿದ್ದಾರೆ.

Google News Join Facebook Live 24/7 Help Desk

Tags: