ಸ್ನೇಹಿತೆಯ ಸಾವಿಗೆ ಮನನೊಂದು ಶರಣಾದ ಸ್ನೇಹಿತ

May 18, 2024 - 11:18
 71
Google  News Join WhatsApp Join Telegram View ePaper

ಸ್ನೇಹಿತೆಯ ಸಾವಿಗೆ ಮನನೊಂದು ಶರಣಾದ ಸ್ನೇಹಿತ

Panchayat Swaraj Samachar News Desk.

ಧಾರಾವಾಹಿ ನಟಿ ಪವಿತ್ರಾ ಜಯರಾಮ್ ಅಪಘಾತ ಪ್ರಕರಣದಲ್ಲಿ ತಿರುವು ಸಿಕ್ಕಿದೆ. ಪವಿತ್ರಾ ಗೆಳೆಯ, ಸೀರಿಯಲ್‌ ನಟ ಚಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಣಿಕೊಂಡದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಇವತ್ತು ಪವಿತ್ರಾ ಹುಟ್ಟುಹಬ್ಬ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪವಿತ್ರಾ ಸಾವಿನ ನಂತರ ಯೂಟ್ಯೂಬ್ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಚಂದು, ಮಿದುಳಿನ ಕಾಯಿಲೆ ಇದ್ದು ಸಾಯುತ್ತೇನೆ ಎಂದು ಪ್ರತಿಕ್ರಿಯಿಸಿದ್ದರು.

ಐದು ದಿನಗಳ ಹಿಂದಷ್ಟೇ ಮೆಹಬೂಬ್‌ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪವಿತ್ರಾ ಸಾವನ್ನಪ್ಪಿದ್ದರು. ಬೆಂಗಳೂರಿನಿಂದ ಹೈದರಾಬಾದ್‌ಗೆ ಬರುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಪವಿತ್ರಾ ಸಾವಿಗೀಡಾಗಿದ್ದರು. ಅದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಂದು ಅವರಿಗೆ ಸಣ್ಣಪುಟ್ಟ ಗಾಯಗಳಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಚಂದು ತ್ರಿನಯನಿ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಚಂದುಗೆ ಶಿಲ್ಪಾ ಎಂಬವರ ಜೊತೆ ವಿವಾಹವಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕಿರುತೆರೆ ನಟಿ ಪವಿತ್ರಾ ಜಯರಾಮ್ ಹಾಗೂ ಜಂದು ಸ್ನೇಹಿತರಾಗಿದ್ದರು ಎನ್ನಲಾಗಿದೆ.

Google News Join Facebook Live 24/7 Help Desk

Tags: