ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ಕೊಲೆ, ಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ

Apr 19, 2024 - 09:40
 121
Google  News Join WhatsApp Join Telegram View ePaper

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ಕೊಲೆ, ಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ

Panchayat Swaraj Samachar News Desk.

ಹುಬ್ಬಳ್ಳಿ,: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರೊಬ್ಬ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಗುರುವಾರ ಬಿವಿಬಿ ಕಾಲೇಜ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಸದ್ಯ ಮೃತದೇಹವನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪೋಷಕರ ಆಕ್ರಂದನ‌ ಮುಗಿಲು ಮುಟ್ಟಿದೆ. ಇನ್ನು ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು, ಕೊಲೆ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿ ಫಯಾಜ್ ಎನ್ನುವಾತನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ನೇಹಾ ಹಿರೇಮಠ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಓದುತ್ತಿದ್ದಳು. ಇನ್ನು ಕೊಲೆ ಆರೋಪಿ ಫಯಾಜ್‌ ಸಹ ಅದೇ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದಾನೆ. ಹೀಗಾಗಿ ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ನೇಹಾಳನ್ನು ಕೊಲೆ ಮಾಡಿದ್ದಾನೆ. ಕಳೆದ ಕೆಲ ದಿನಗಳಿಂದ ಪ್ರೀತಿಸುವಂತೆ ನೇಹಾಳ ಬೆನ್ನುಬಿದ್ದಿದ್ದ. ಆದ್ರೆ, ನೇಹಾ ಪ್ರೀತಿಗೆ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡು ಫಯಾಜ್, ನೇಹಾಳ ಕುತ್ತಿಗೆಯ 2 ಕಡೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಕೊಲೆ ಮಾಡಿರುವ ಆರೋಪಿಯನ್ನ ಬಂಧನ ಮಾಡಲಾಗಿದೆ. ನಿರಂಜನ ಹಿರಮೇಠ ನಮ್ಮ ಪಕ್ಷದ ಪಾಲಿಕೆ ಸದಸ್ಯರು. ಬಹಳ ಒಳ್ಳೆಯ ಹುಡಗಿ,ಯಾವಾಗಲೂ ಅಂಕಲ್ ಎಂದು ಕರೆಯುತ್ತಿದ್ದಳು. ಹುಬ್ಬಳ್ಳಿಯಲ್ಲಿ ಹೀಗಾಗಬಾರದಿತ್ತು ಎಂದರು.

Google News Join Facebook Live 24/7 Help Desk

Tags: