ಹುಬ್ಬಳ್ಳಿಯಲ್ಲಿ ನಡೆಯಿತು ನೇಹಾ ಮಾದರಿಯ ಮತ್ತೊಂದು ಕೊಲೆ

May 15, 2024 - 09:49
 122
Google  News Join WhatsApp Join Telegram View ePaper

ಹುಬ್ಬಳ್ಳಿಯಲ್ಲಿ ನಡೆಯಿತು ನೇಹಾ ಮಾದರಿಯ ಮತ್ತೊಂದು ಕೊಲೆ

Panchayat Swaraj Samachar News Desk.

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆಯ ಕಹಿ ನೆನಪು ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಅಂಥದ್ದೇ ಮತ್ತೊಂದು ಘಟನೆ ನಡೆದಿದೆ. ನಸುಕಿನ ಜಾವ ನಸುನಿದ್ದೆಯಲ್ಲಿದ್ದ ಯುವತಿಯನ್ನು ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಹತ್ಯೆ ಮಾಡಿದ ಭೀಕರ ಘಟನೆಗೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಓಣಿ ಸಾಕ್ಷಿಯಾಗಿದೆ. ಮೃತ ಯುವತಿಯನ್ನು ಅಂಜಲಿ ಅಂಬಿಗೇರ ಎಂದು ಗುರುತಿಸಲಾಗಿದೆ. ವಿಶ್ವ ಅಲಿಯಾಸ್ ಗೀರಿಶ್ ಎಂಬಾತ ಈ ಯುವತಿಯನ್ನು ಹತ್ಯೆ ಮಾಡಿದ್ದು, ನಂತರ ತಲೆಮರೆಸಿಕೊಂಡಿದ್ದಾನೆ.

ನೇಹಾ ಮಾದರಿಯಲ್ಲಿ ಹತ್ಯೆ ಮಾಡುತ್ತೇನೆ ಎಂದು ಅಂಜಲಿ ಅಂಬಿಗೇರಗೆ ವಿಶ್ವ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಅದರಂತೆಯೇ ಬುಧವಾರ ಬೆಳಗ್ಗೆ 5.30ಕ್ಕೆ ಮನೆಗೆ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಮನೆಯವರು ತಡೆಯಲು ಮುಂದಾದರೂ ಬಿಡದೆ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ವಿಶ್ವ ಧಮ್ಕಿ ಹಾಕಿದ್ದ. ಅಕಸ್ಮಾತ್ ನೀನು ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಆದ ಹಾಗೆಯೇ ನಿನಗೂ ಮಾಡುತ್ತೇನೆ ಎಂದು ಧಮ್ಕಿ ಹಾಕಿದ್ದ. ಈತನ ವಿರುದ್ಧ ಹಲವು ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾದ ಆರೋಪವೂ ಇದೆ. ಜತೆಗೆ, ಬೈಕ್ ಕಳ್ಳತನದಲ್ಲಿಯೂ ಆರೋಪಿಯಾಗಿದ್ದಾನೆ.

Google News Join Facebook Live 24/7 Help Desk

Tags: