ಬೆಳಗಾವಿ : ಗಡಿಯಾಚೆ ಇರುವವರು ನಮ್ಮವರು; ಅಲ್ಲಿನ ಕನ್ನಡ ಶಾಲೆಗಳನ್ನು ಅಲ್ಲಿನ ರಾಜ್ಯ ಸರಕಾರ ಕಡೆಗಣಿಸಿರುವುದರಿಂದ. ಮೂಲಸೌಕರ್ಯ ಕಲ್ಪಿಸುವುದು ಸಾಧ್ಯವಾಗಿರುವುದಿಲ್ಲ. ಹೀಗಾಗಿ ಗಡಿ ಭಾಗದ ಶಾಲೆಗಳಿಗೆ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದರು.
ರಾಮದುರ್ಗ ತಾಲೂಕಿನ ಅಂದಾಜು ರೂ. 671.28 ಕೋಟಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,
ಗಡಿಭಾಗದ ಶಾಲೆಗಳ ಅಭಿವೃದ್ದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಇದೇ ವರ್ಷ 100 ಕೋಟಿ ರೂಪಾಯಿ ಖರ್ಚು ಮಾಡಲಾಗುವುದು.
ಗೋವಾದಲ್ಲಿ ಹತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ಅದೇ ರೀತಿ ಸೋಲಾಪುರ ಹಾಗೂ ಕಾಸರಗೋಡಿನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ತಲಾ ಹತ್ತು ಕೋಟಿ ರೂಪಾಯಿಗಳನ್ನು ಸರಕಾರ ನೀಡಲಿದೆ.