spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ಕೈಕೊಟ್ಟ ಯೋಜನೆಗಳು, ಹಳಿತಪ್ಪಿದ ಆಡಳಿತ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ 100 ವೈಫಲ್ಯಗಳ‌ ಚಾರ್ಜ್​ಶೀಟ್ ರಿಲೀಸ್

ಬೆಂಗಳೂರು: ವಿಧಾನಸಭೆ ಚುನಾವಣೆ ಅಭೂತ ಪೂರ್ವ ಬಹುಮತೊಂದಿಗೆ ಅಧಿಕಾರಕ್ಕೇರಿರು ಕಾಂಗ್ರೆಸ್ ಸರ್ಕಾರ ಇದೀಗ ನೂರು ದಿನಗಳನ್ನು ಪೂರೈಸಿದೆ. ಇನು ಇತ್ತ ಬಿಜೆಪಿ ರಾಜ್ಯ ಸರ್ಕಾರದ 100 ವೈಫಲ್ಯಗಳ‌ ಚಾರ್ಜ್​ಶೀಟ್ ಬಿಡುಗಡೆ ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಇಂದು(ಆಗಸ್ಟ್ 29 ರಾಜ್ಯ ಸರ್ಕಾರದ 100 ವೈಫಲ್ಯಗಳ ಒಳಗೊಂಡ ಒಂದು ಪುಸ್ತಕವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬಿಡುಗಡೆಗೊಳಿಸಿದರು. ಕೈಕೊಟ್ಟ ಯೋಜನೆಗಳು, ಹಳಿತಪ್ಪಿದ ಆಡಳಿತ ಎಂಬ ಹೆಸರಿನ ಪುಸ್ತಕ ಇದಾಗಿದೆ. ಕೇವಲ ಮಾಧ್ಯಮ ವರದಿಗಳನ್ನೇ ಮುದ್ರಿಸಿ ಪುಸ್ತಕದ ರೂಪದಲ್ಲಿ ಬಿಡುಗಡೆ ಮಾಡಲಾಗಿದ್ದು, ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿನ ಆರೋಪಗಳು ಸೇರಿದಂತೆ ವರ್ಗಾವಣೆ ದಂಧೆ, ಶಾಸಕರು-ಸಚಿವರ ನಡುವಿನ ಹಗ್ಗಜಗ್ಗಾಟ ಸೇರಿದಂತೆ ಇತರೆ ವಿಷಯನ್ನೊಳಗೊಂಡಿದೆ.

00 ವೈಫಲ್ಯಗಳ‌ ಪುಸ್ತಕ ಬಿಡುಗಡೆಗೊಳಿಸಿದ ಬಳಿಕ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಈ ನೂರು ದಿನಗಳಲ್ಲಿ ಕಾಂಗ್ರೆಸ್​​ ಸರ್ಕಾರ ಜನದ್ರೋಹ ಮಾಡಿದೆ. ಕಾಂಗ್ರೆಸ್​​ ಅಧಿಕಾರಕ್ಕೆ ಬಂದ ನಂತರ ನೂರಾರು ತಪ್ಪು ಮಾಡಿದೆ. ಇಬ್ಬರು ಸಚಿವರ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು. ಭ್ರಷ್ಟಾಚಾರ ಆರೋಪ ಕೇಳಿ ಬಂದರೂ ರಾಜೀನಾಮೆ ಪಡೆಯಲಿಲ್ಲ. ನಮ್ಮ ಸರ್ಕಾರವಿದ್ದಾಗ ಬಂಡವಾಳ ಹೂಡಿಕೆ ಅತಿ ಹೆಚ್ಚು ಬಂದಿತ್ತು. ಈಗ ವಿದ್ಯುತ್ ದರ ಹೆಚ್ಚಳ, ವ್ಯತ್ಯಯದಿಂದ ಹೂಡಿಕೆದಾರರು ವಾಪಸ್ ಹೋಗಿದ್ದಾರೆ. ರೈತ ವಿದ್ಯಾನಿಧಿ, ಕಿಸಾನ್​​ ಸಮ್ಮಾನ್ ಯೋಜನೆಗಳಿಗೆ ಕತ್ತರಿ ಹಾಕಿದ್ದಾರೆ. 2 ಶಕ್ತಿಗಳು ಸಿಎಂ ಕಂಟ್ರೋಲ್ ಮಾಡುತ್ತಿವೆ ಎಂಬುದನ್ನು ಕೇಳಿದ್ದೇವೆ. ಭ್ರಷ್ಟಾಚಾರ ನಿಯಂತ್ರಣ ಮಾಡುವಲ್ಲೂ ಸರ್ಕಾರ ವಿಫಲವಾಗಿದೆ ಎಂದು ಸಾಲು ಸಾಲು ಆರೋಪಗಳನ್ನು ಮಾಡಿದರು.

ಎಲ್ಲದ್ದಕ್ಕಿಂತ ಹೆಚ್ಚಾಗಿ ದ್ವೇಷದ ರಾಜಕಾರಣ ನಡೆಯುತ್ತಿದೆ. ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಿ ಜೈಲಿಗೆ ಹಾಕುತ್ತಿದ್ದಾರೆ. ಹಿಂದಿನ ತುರ್ತು ಪರಿಸ್ಥಿತಿಯನ್ನು ನಿರ್ಮಾಣ ಮಾಡುತ್ತಿದ್ದಾರೆ. ಮಾಧ್ಯಮಗಳ ಮೇಲೂ ಇವರು ದಬ್ಬಾಳಿಕೆ ಮಾಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲೂ ವಿಫಲ ರಾಗಿದ್ದಾರೆ. ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿಲ್ಲ. ಮೂರು ತಿಂಗಳಲ್ಲಿ ಶಾಸಕರ ಅನುದಾನ ಕೂಡ ಬಿಡುಗಡೆ ಮಾಡಿಲ್ಲ. ನೂರು ದಿನಗಳಲ್ಲಿ ಮಾಡಿರುವ ತಪ್ಪುಗಳ ಬಗ್ಗೆ ಜನರ ಮುಂದೆ ಇಡುತ್ತೇವೆ ಎಂದರು.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -