ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1100 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.
ಖಾಲಿ ಇರುವ 1000 ಅಬಕಾರಿ ಪೇದೆ, 100 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಬಕಾರಿ ಇಲಾಖೆಯಿಂದ ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಹೊಸ ಮದ್ಯ ತಯಾರಿಕೆಗೆ ಉದ್ಯಮಿಗಳು ಮುಂದೆ ಬಂದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿ ಅನುಮೋದನೆ ನೀಡಲಿದ್ದು, ಇದರಿಂದ ರಾಜ್ಯದಲ್ಲಿ ಉದ್ಯೋಗ ಸೃಜನೆಯಾಗುತ್ತದೆ ಎಂದು ತಿಳಿಸಿದ್ದಾರೆ,
ಮದ್ಯದ ದರ ಪರಿಷ್ಕರಣೆ ವಿಚಾರ ಸರ್ಕಾರದ ಮುಂದಿಲ್ಲ. ನಿರೀಕ್ಷೆಗೂ ಮೀರಿ ಆದಾಯ ಸಂಗ್ರಹವಾಗಿದೆ ಎಂದು ಹೇಳಿದ್ದಾರೆ