spot_img
22.9 C
Belagavi
Sunday, December 4, 2022
spot_img

ಹ್ಯಾಲೋವೀನ್ ಹಬ್ಬದಲ್ಲಿ ಕಾಲ್ತುಳಿತ : 151 ಜನ ಸಾವು 

ದಕ್ಷಿಣ ಕೊರಿಯಾ : ಹ್ಯಾಲೋವೀನ್ ಹಬ್ಬದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 151ಜನ ಸಾವನ್ನಪ್ಪಿದ್ದಾರೆ. ಗಾಯಾಳುಗಳ ಸಂಖ್ಯೆ 150ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕೊರಿಯಾದ ಸಿಯೋಲ್ ನಲ್ಲಿ ನಡೆಯುತ್ತಿದ್ದ ಹಬ್ಬಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಈ ವೇಳೆ ಸ್ಥಳದಲ್ಲಿ ಜನಸಂದಣಿ ಹೆಚ್ಚಾಗಿ ನೂಕುನುಗ್ಗಲು ಆರಂಭವಾಗಿದೆ.

ಪರಿಣಾಮವಾಗಿ ಒಂದಷ್ಟು ಮಂದಿ ಉಸಿರಾಟದ ಸಮಸ್ಯೆ ಎದುರಾಗಿ ಕುಸಿದುಬಿದ್ದಿದ್ದು, ಕಾಲ್ತುಳಿತವೂ ನಡೆಯಿತು. ಲೋವೀನ್ ಹಬ್ಬದಲ್ಲಿ ಹೆಚ್ಚಾದ ಜನಸಂದಣಿಯಿಂದಾಗಿ ಇಟಾವೊನ್‌ನ ಬೀದಿಗಳಲ್ಲಿ ಕಾಲ್ತುಳಿತ ಸಂಭವಿಸಿದೆ ಎಂದು ಪೋಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಘಟನೆಯ ಬಗ್ಗೆ ನಡೆಸುತ್ತಿರುವ ತನಿಖೆ ಮುಂದುವರಿದಿದೆ ಎಂದು ಹೇಳಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಮತ್ತು ಗಾಯಗೊಂಡವರಲ್ಲಿ ಹೆಚ್ಚಿನವರ ಸ್ಥಿತಿ ಗಂಭೀರವಾಗಿದೆ.

ಅಪರಿಚಿತ ಸೆಲೆಬ್ರಿಟಿಯೊಬ್ಬರು ಅಲ್ಲಿಗೆ ಭೇಟಿ ನೀಡಿರುವುದನ್ನು ಕೇಳಿದ ನಂತರ ಹೆಚ್ಚಿನ ಸಂಖ್ಯೆಯ ಜನರು ಇಟಾವಾನ್ ಬಾರ್‌ಗೆ ಧಾವಿಸಿದ ನಂತರ ಈ ಘಟನೆ ಸಂಭವಿಸಿದೆ ಎಂದು ಕೆಲವು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಅಘಾತಗೊಂಡವರಿಗೆ ತ್ವರಿತ ಚಿಕಿತ್ಸೆಯನ್ನು ನೀಡಲು ಮತ್ತು ಹಬ್ಬದ ಸ್ಥಳಗಳ ಸುರಕ್ಷತೆಯನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -