spot_img
spot_img
spot_img
18.5 C
Belagavi
Thursday, September 29, 2022
spot_img

2500 ಕೋಟಿ ಕೊಡಿ ನಿಮ್ಮನ್ನು ಸಿಎಂ ಮಾಡುತ್ತೇವೆ ಎಂದಿದ್ರು : ಶಾಸಕ ಯತ್ನಾಳ್ 

spot_img

ಬೆಳಗಾವಿ: ನಿಮ್ಮನ್ನು ಸಿಎಂ ಮಾಡುತ್ತೇವೆ 2500 ಕೋಟಿ ರೂಪಾಯಿ ಕೊಡಿ ಎಂದು ದೆಹಲಿಯಿಂದ ಬಂದ ಕೆಲವರು ಕೇಳಿದ್ದರು ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಹಾಕಿದ್ದಾರೆ.

ಜಿಲ್ಲೆಯ ರಾಮದುರ್ಗದಲ್ಲಿ ಮಾತನಾಡಿದ ಅವರು, ದೆಹಲಿ ಕೆಲವರು 2500 ಕೋಟಿ ರೂ.ಕೇಳಿದಾಗ ನಾನು 2500 ಕೋಟಿ ಅಂದರೆ ಏನು ಅಂತ ತಿಳಿದಿದ್ದೀರಿ ಎಂದು ಕೇಳಿದೆ. ಆ ಎರಡೂವರೆ ಸಾವಿರ ಕೋಟಿ ಹೇಗೆ ಇಡುವುದು? ಕೋಣೆಯಲ್ಲಿ ಇಡುವುದಾ.. ? ಗೋದಾಮಿನಲ್ಲಿ ಇಡುವುದಾ..? ಎಂದಿದ್ದೆ.

ದೆಹಲಿಗೆ ಕರೆದುಕೊಂಡು ಹೋಗಿ ಸೋನಿಯಾ ಗಾಂಧಿ, ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿಸುತ್ತೇವೆ ಎನ್ನುತ್ತಾರೆ.ಟಿಕೆಟ್ ಕೊಡಿಸುತ್ತೇವೆ ಎಂದು ಹೇಳುತ್ತಾರೆ. ನಾನು ವಾಜಪೇಯಿಯವರ ಅವಧಿಯಲ್ಲಿ ಕೆಲಸ ಮಾಡಿದವನು. ನನಗೇ 2500 ಕೋಟಿ ರೂಪಾಯಿ ಕೊಡಿ ಸಿಎಂ ಮಾಡುತ್ತೇವೆ ಎಂದಿದ್ದರು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -