Ad imageAd image

ಪ್ರತಿ ಕೇತ್ರಕ್ಕೆ 26 ಕೋಟಿ ಅನುದಾನ – ಕೈ ಶಾಸಕರಿಗೆ ಸಿಎಂ ಭರವಸೆ

ratnakar
ಪ್ರತಿ ಕೇತ್ರಕ್ಕೆ 26 ಕೋಟಿ ಅನುದಾನ – ಕೈ ಶಾಸಕರಿಗೆ ಸಿಎಂ ಭರವಸೆ
WhatsApp Group Join Now
Telegram Group Join Now

ಬೆಳಗಾವಿ: ನಮ್ಮದೇ ಸರ್ಕಾರ ಇದ್ದರೂ ನಮಗೆ ಅನುದಾನ  ಸಿಗುತ್ತಿಲ್ಲ ಎಂದು ನೋವು ತೋಡಿಕೊಂಡಿದ್ದ ಕಾಂಗ್ರೆಸ್‌ ಶಾಸಕರಿಗೆ  ಸಿಎಂ ಸಿದ್ದರಾಮಯ್ಯ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಕಾಂಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ಸದನದಲ್ಲೇ ಈ ಬಗ್ಗೆ ಘೋಷಣೆ ಮಾಡಿ ನಿರ್ಧಾರ ಪ್ರಕಟಿಸುತ್ತೇನೆ ಎಂದು ತಿಳಿಸಿದ್ದಾರೆ.

ಅನುದಾನ ಕೊರತೆ ನೀಗಿಸಲು ಒಟ್ಟು 6 ಸಾವಿರ ಕೋಟಿ ರೂ. ಬಿಡುಗಡೆ ಸಂಬಂಧ ಘೋಷಣೆ ಮಾಡುತ್ತೇನೆ. ಲೋಕೋಪಯೋಗಿ ಇಲಾಖೆಯಿಂದ 4 ಸಾವಿರ ಕೋಟಿ ರೂ., ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ 2 ಸಾವಿರ ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ ದೃಷ್ಟಿಯಿಂದ ಎರಡು ಇಲಾಖೆಯಿಂದ ಒಟ್ಟು 6 ಸಾವಿರ ರೂ. ಹಣವನ್ನು ಬಿಡುಗಡೆ ಮಾಡಲಾಗುವುದು. ಕನಿಷ್ಟ 26 ಕೋಟಿ ರೂ.ಗೂ ಹೆಚ್ಚು ಹಣ ಒಂದೊಂದು ಕ್ಷೇತ್ರಕ್ಕೆ ಸಿಗಲಿದೆ. ಯಾರು ಬೇಸರ ಮಾಡಿಕೊಳ್ಳಬೇಡಿ ಎಂದು ಸಿಎಂ ಭರವಸೆ ನೀಡಿದ್ದಾರೆ.

WhatsApp Group Join Now
Telegram Group Join Now
Share This Article