ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಉಗ್ರ ಹೋರಾಟದ ಮಾಡುವುದಾಗಿ ಕೂಡಲಸಂಗಮದ ಪಂಚಮಸಾಲಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಇಂದು (ಡಿ.12) ಬೆಳಗಾವಿ ಅಧಿವೇಶನದ ವೇಳೆ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಪ್ರಕರಣದ ಹಿನ್ನೆಲೆ ಉಗ್ರ ಹೋರಾಟ ಮಾಡುವುದಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪಂಚಮಸಾಲಿ ಸಮಾಜಕ್ಕೆ ಪ್ರತಿಭಟನೆಗೆ ಕರೆ ನೀಡಿದ್ದಾರೆ. ರಾಜ್ಯಾದ್ಯಂತ ಪಂಚಮಸಾಲಿ ಸಮಾಜದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ. ಸದನದ ಒಳಗೂ ಹೊರಗೂ ಪಂಚಮಸಾಲಿ ಮೀಸಲಾತಿ ಹೋರಾಟ ಸದ್ದು ಮಾಡಲಿದ್ದು, ಜೊತೆಗೆ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಲಾಗಿದೆ.
ಬೆಳಗಾವಿ ಹಿರೇಬಾಗೇವಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಸ್ವಾಮೀಜಿ ನೇತೃತ್ವದಲ್ಲಿ ಬೆಳಗ್ಗೆ 10:30ಕ್ಕೆ ಪ್ರತಿಭಟನೆ ನಡೆಯಲಿದ್ದು, ಪಂಚಮಸಾಲಿ ಸಮಾಜದವರು ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದ್ದಾರೆ. ಮನವಿ ಮೂಲಕ ಸಿಎಂ ಸಿದ್ದರಾಮಯ್ಯ, ಎಡಿಜಿಪಿ ಆರ.ಹಿತೇಂದ್ರ ಅವರನ್ನು ವಜಾ ಮಾಡಬೇಕು. ಮೀಸಲಾತಿ ಹೋರಾಟವನ್ನ ಸರ್ಕಾರ ಹತ್ತಿಕ್ಕಲು ಯತ್ನಿಸಿದೆ. ತಕ್ಷಣವೇ ಪಂಚಮಸಾಲಿ ಸಮಾಜಕ್ಕೆ ಕ್ಷಮೆ ಕೇಳಬೇಕು. ಇದು ಲಿಂಗಾಯತ ವಿರೋಧಿ ಸರ್ಕಾರ ಎಂದು ಪ್ರತಿಭಟನೆ ಮೂಲಕ ಆಗ್ರಹಿಸಲಿದ್ದಾರೆ.