spot_img
spot_img
spot_img
spot_img
spot_img
30.1 C
Belagavi
Sunday, December 3, 2023
spot_img

ರಾಜ್ಯಕ್ಕೆ 3ನೇ ವಂದೇ ಭಾರತ್ ರೈಲು – ಇಂದು ಪ್ರಾಯೋಗಿಕ ಸಂಚಾರ

ನವದೆಹಲಿ: ರಾಜ್ಯದ 3ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸೆಪ್ಟೆಂಬರ್ 24ಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಇಂದು (ಗುರುವಾರ) ಈ ರೈಲು ಪ್ರಾಯೋಗಿಕ ಸಂಚಾರ ನಡೆಸಲಿದೆ.

ಹೈದರಾಬಾದ್‌ನ ಕಾಚಿಗುಡ – ಯಶವಂತಪುರ ನಿಲ್ದಾಣದ ನಡುವೆ ಸಂಚರಿಸುವ ರೈಲಿಗೆ ಸೆಪ್ಟೆಂಬರ್ 24ಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಇದು ದಕ್ಷಿಣ ಭಾರತದ 2 ಐಟಿ ನಗರಗಳ ನಡುವಿನ ಮೊದಲ ವಂದೇ ಭಾರತ್ ರೈಲಾಗಲಿದೆ.

ಇಂದು ರೈಲು ಕಾಚಿಗುಡದಿಂದ ಹೊರಟು ಮಧ್ಯಾಹ್ನ 2 ಗಂಟೆಗೆ ಯಶವಂತಪುರ ನಿಲ್ದಾಣ ತಲುಪಲಿದೆ. ಮಧ್ಯಾಹ್ನ 2:45 ಕ್ಕೆ ಯಶವಂತಪುರದಿಂದ ಕಾಚಿಗುಡ ತೆರಳಲಿದೆ. ರೈಲು ಸುಮಾರು 610 ಕಿ.ಮೀ ಅಂತರವನ್ನು 7 ಗಂಟೆಯಲ್ಲಿ ಕ್ರಮಿಸಬಹುದು ಎಂದು ಬೆಂಗಳೂರು ನೈಋತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Related News

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ -ಜಮೀರ್ ಅಹ್ಮದ್ ಖಾನ್

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್​ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು -ಎಂ.ಬಿ.ಪಾಟೀಲ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....

Latest News

- Advertisement -
- Advertisement -
- Advertisement -
- Advertisement -