spot_img
spot_img
spot_img
18 C
Belagavi
Thursday, September 29, 2022
spot_img

ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ : 4 ದಿನ ಬ್ಯಾಂಕ್’ಗಳು ಬಂದ್

spot_img

ನವದೆಹಲಿ: ಮಾರ್ಚ್ 28 ಮತ್ತು 29ರಂದು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬ್ಯಾಂಕ್ ನೌಕರರ ಒಕ್ಕೂಟ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಮಾರ್ಚ್ 28 ಮತ್ತು ಮಾರ್ಚ್ 29ರಂದು ಬ್ಯಾಂಕ್’ಗಳು ಬಂದ್ ಆಗಲಿವೆ.

ಈ ಕುರಿತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾಹಿತಿ ಹಂಚಿಕೊಂಡಿದ್ದು, ವಿವಿಧ ಬ್ಯಾಂಕ್ ನೌಕರರ ಸಂಘಟನೆಗಳಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಹೀಗಾಗಿ ಸತತ ನಾಲ್ಕು ದಿನಗಳು ಬ್ಯಾಂಕ್ ವ್ಯವಹಾರದಲ್ಲಿ ತೊಂದರೆ ಉಂಟಾಗಲಿದೆ ಎಂದು ತಿಳಿಸಿದ್ದಾರೆ.

ಇನ್ನು ಈ ತಿಂಗಳ ಕೊನೆಯ ವಾರದಲ್ಲಿ ನಾಲ್ಕು ದಿನಗಳ ಕಾಲ ಬ್ಯಾಂಕ್ ಗಳು ಮುಚ್ಚಲ್ಪಡಲಿವೆ. ಶನಿವಾರ, ಭಾನುವಾರದ ರಜೆಯಿಂದಾಗಿ ಎರಡು ದಿನ ಬ್ಯಾಂಕ್ ಬಂದ್ ಆದ್ರೆ, ಸೋಮವಾರ ಹಾಗೂ ಮಂಗಳವಾರ ನೌಕರರ ಮುಷ್ಕರದಿಂದಾಗಿ ಬ್ಯಾಂಕ್ ಬಂದ್ ಆಗಲಿವೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -