spot_img
28.1 C
Belagavi
Saturday, December 3, 2022
spot_img

ಬ್ರೇಕ್ ಫೇಲ್ ಆಗಿ ಅಫಘಾತ : 48 ವಾಹನಗಳು ಜಖಂ

ನವದೆಹಲಿ: ಪುಣೆಯ ನವಲೆ ಸೇತುವೆಯಲ್ಲಿ ಭಾನುವಾರ ಟ್ಯಾಂಕರ್ವೊಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, 30 ಮಂದಿ ಗಾಯಗೊಂಡಿದ್ದಾರೆ.

ಈ ಘಟನೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪುಣೆ ಸಮೀಪದ ನವಲೆ ಬ್ರಿಡ್ಜ್​ನಲ್ಲಿ ನಡೆದಿದೆ. ಅಪಘಾತದಲ್ಲಿ 48 ವಾಹನಗಳು ಜಖಂಗೊಂಡಿವೆ ಎಂದು ಪುಣೆ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಗ್ನಿಶಾಮಕ ದಳ ಮತ್ತು ಪುಣೆ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳ ಪ್ರಕಾರ, ಟ್ಯಾಂಕರ್‌ನ ಬ್ರೇಕ್ ವಿಫಲವಾಗಿದ್ದು, ಟ್ಯಾಂಕರ್ ಚಾಲಕನ ನಿಯಂತ್ರಣಕ್ಕೆ ಬಾರದೇ ಮತ್ತು ರಸ್ತೆಯಲ್ಲಿ ತೈಲ ಚೆಲ್ಲಿದ ಕಾರಣ ಅದು ಜಾರುವಂತಾಗಿ ಒಂದಕ್ಕೊಂದು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಮುಂಬೈಗೆ ಹೋಗುವ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, 2 ಕಿ.ಮೀ.ಗೂ ಹೆಚ್ಚು ಜಾಮ್ ಉಂಟಾಗಿದೆ ಎಂದು ವರದಿಯಾಗಿದೆ.

 

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -