ಬೆಂಗಳೂರು: ಬೆಂಗಳೂರಿನ ಉದ್ಯಮಿಗೆ ಸೇರಿದ 6 ಕಡೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಉದ್ಯಮಿ ಉಷಾ ರಾಮನಾನಿ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ.
ಉಷಾ ಆಪ್ಟ್ ಸರ್ಕ್ಯೂಟ್ ಇಂಡಿಯಾ ಪ್ರೈ.ಲಿ.ಕಂಪನಿಯ ಎಂಡಿ ಆಗಿದ್ದಾರೆ. ಬೆಳ್ಳಂದೂರಿನ ಕಸವನಹಳ್ಳಿಯಲ್ಲಿರುವ ಉಷಾ ರಾಮನಾನಿ ನಿವಾಸ, ಎಲೆಕ್ಟ್ರಾನಿಕ್ ಸಿಟಿ, ಪುಟ್ಟೇನಹಳ್ಳಿ ಸೇರಿದಂತೆ ಆರು ಕಡೆ ಪರಿಶೀಲನೆ ನಡೆಸಿದ್ದಾರೆ. ಕಂಪನಿ 2011-16ರ ಅವಧಿಯಲ್ಲಿ ಎಸ್ಬಿಐಗೆ ನಕಲಿ ದಾಖಲೆ ಸೃಷ್ಟಿಸಿ 354 ಕೋಟಿ ರೂ. ಸಾಲ ಪಡೆದಿದೆ. ನಂತರ ಬ್ಯಾಂಕ್ಗೆ ಸಾಲ ಪಾವತಿಸದೆ ವಂಚಿಸಿದ್ದರು. PMLA ಅಡಿ ಪ್ರಕರಣ ದಾಖಲಿಸಿಕೊಂಡು ಈಡಿ ತನಿಖೆ ನಡೆಸುತ್ತಿದೆ.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....