72 ಸಚಿವರು, 11 ಮಿತ್ರರಾಷ್ಟ್ರಗಳು, 24 ರಾಜ್ಯಗಳು; ಪ್ರಮಾಣ ವಚನ ಸ್ವೀಕರಿಸಿದ ಮೋದಿಯ ಹೊಸ ಟೀಂ

Jun 9, 2024 - 20:40
 77
Google  News Join WhatsApp Join Telegram View ePaper

72 ಸಚಿವರು, 11 ಮಿತ್ರರಾಷ್ಟ್ರಗಳು, 24 ರಾಜ್ಯಗಳು; ಪ್ರಮಾಣ ವಚನ ಸ್ವೀಕರಿಸಿದ ಮೋದಿಯ ಹೊಸ ಟೀಂ

Panchayat Swaraj Samachar News Desk.

ನವದೆಹಲಿ: ಭಾರತದ ಹೊಸ ಸಮ್ಮಿಶ್ರ ಸರ್ಕಾರದ 72 ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೊದಲು ಇಂದು 30 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಅವರಲ್ಲಿ 30 ಕ್ಯಾಬಿನೆಟ್ ಮಂತ್ರಿಗಳು, 5 ಸ್ವತಂತ್ರ ಉಸ್ತುವಾರಿ ಮತ್ತು 36 ರಾಜ್ಯ ಸಚಿವರು ಸೇರಿದ್ದಾರೆ.

ಈ ನೂತನ ಮೋದಿ ಟೀಂಗೆ ಯಾವ ಖಾತೆಗಳನ್ನು ನೀಡಬೇಕೆಂಬ ಬಗ್ಗೆ ಇನ್ನೂ ನಿರ್ಧರಿಸಿಲ್ಲ. 73 ವರ್ಷದ ಪ್ರಧಾನಿ ನರೇಂದ್ರ ಮೋದಿ ಅವರು 10 ವರ್ಷಗಳ ಯುಪಿಎ ಆಡಳಿತದ ನಂತರ 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿದ್ದರು. ಅವರು ಪ್ರಧಾನಿಯಾದ ನಂತರ ಮೊದಲ ಬಾರಿಗೆ ತಮ್ಮ 3ನೇ ಅವಧಿಗೆ ಅಥವಾ ಮೋದಿ 3.0ನಲ್ಲಿ ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಲಿದ್ದಾರೆ.

Google News Join Facebook Live 24/7 Help Desk

Tags: