ಮುಂಬೈ: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತೆ ಕ್ಯಾತೆ ತೆಗೆದಿದ್ದು, ಮಹಾರಾಷ್ಟ್ರ ವಿಧಾನಸಭೆಯಲ್ಲಿ ಗಡಿ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ನಿಲುವಳಿ ಮಂಡಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಸರ್ವಾನುಮತದಿಂದ ಮಹಾರಾಷ್ಟ್ರದೊಂದಿಗಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಿರ್ಣಯವನ್ನು ಅಂಗೀಕರಿಸಿದ ಕೆಲವು ದಿನಗಳ ನಂತರ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಖಂಡಿಸಿ, ವಿಧಾನಸಭೆಯಲ್ಲಿ ಇದೇ ರೀತಿಯ ನಿರ್ಣಯವನ್ನು ಮಂಡಿಸಿದರು. ಇದನ್ನು ಸಹ ಸರ್ವಾನುಮತದಿಂದ ಅಂಗೀಕರಿಸಲಾಯಿತು.
ಬೆಳಗಾವಿ, ನಿಪ್ಪಾಣಿ, ಕಾರವಾರದ ಸೇರಿದಂತೆ 865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕೆಂದು ಸಿಎಂ ಏಕನಾಥ್ ಶಿಂಧೆ ವಿಧಾನಸಭೆಯಲ್ಲಿ ನಿಲುವಳಿ ಮಂಡಿಸಿದ್ದಾರೆ