ಬೆಂಗಳೂರು: ಶಕ್ತಿ ಯೋಜನೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು ಸೋಮವಾರ ಒಂದೇ ದಿನ 41 ಲಕ್ಷ ಮಹಿಳಾ ಪ್ರಯಾಣಿಕರು ಉಚಿತವಾಗಿ ಸಂಚಾರ ಮಾಡಿದ್ದಾರೆ.
ಸೋಮವಾರ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ 8,83,53,434 ರೂ. ಆಗಿದೆ. ಭಾನುವಾರ ಒಟ್ಟು 5.71 ಲಕ್ಷ ಮಂದಿ ಪ್ರಯಾಣ ಮಾಡಿದ್ದು ಆ ದಿನದ ಪ್ರಯಾಣದ ಮೌಲ್ಯ 1,40,22,878 ರೂ. ಆಗಿದೆ ಎಂದು ಸರ್ಕಾರ ತಿಳಿಸಿದೆ.
ಭಾನುವಾರ ಶಕ್ತಿ ಯೋಜನೆಗೆ ಚಾಲನೆ ಸಿಕ್ಕಿದ್ದರೂ ವಾರಾಂತ್ಯವಾದ ಕಾರಣ ಕಚೇರಿಗಳಿಗೆ ರಜೆ ಇತ್ತು. ಆದರೆ ಸೋಮವಾರ ಕೆಲಸದ ದಿನವಾಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸಂಚರಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭಾನುವಾರ ಒಟ್ಟು 5 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಉಚಿತ ಸೇವೆಯನ್ನ ಬಳಿಸಿಕೊಂಡಿದ್ದರೆ ಸೋಮವಾರ ಈ ಸಂಖ್ಯೆ 41 ಲಕ್ಷಕ್ಕೆ ಏರಿಕೆಯಾಗಿದೆ ಎಂದರು.