ಗುಜರಾತ್ : ನವಸಾರಿಯಲ್ಲಿ ಬಸ್ ಮತ್ತು ಎಸ್‌ಯುವಿ ನಡುವೆ ಭೀಕರ ಅಪಘಾತದಲ್ಲಿ 9 ಜನ ಸಾವು ಕಂಡಿದ್ದು, 32 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ನಸುಕಿನ ವೇಳೆ ನವಸಾರಿಯಲ್ಲಿ ಅಪಘಾತ ಸಂಭವಿಸಿದೆ. ಗಾಯಗೊಂಡ 32 ಮಂದಿಯನ್ನುಆಸ್ಪತ್ರೆಗೆ ದಾಖಲಿಸಲಾಗಿದೆ.
ಒಂಬತ್ತು ಮೃತದೇಹಗಳನ್ನು ಪೊಲೀಸ್ ತಂಡಗಳು ಹೊರತೆಗೆದು ಶವಪರೀಕ್ಷೆಗೆ ಕೊಂಡೊಯ್ಯಲಾಗಿದೆ. ಬಸ್ ಅಹಮದಾಬಾದ್‌ನಿಂದ ವಲ್ಸಾದ್‌ಗೆ ತೆರಳುತ್ತಿತ್ತು.
ತಪ್ಪು ದಿಕ್ಕಿನಿಂದ ಬಂದ ಕಾರಿಗೆ ಬಸ್ ಡಿಕ್ಕಿ ಹೊಡೆಯುವ ಮೊದಲು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಚಾಲಕನಿಗೆ ಹೃದಯಾಘಾತವಾಗಿ ಈ ದುರ್ಘಟನೆ ನಡೆದಿದೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ಬಯಲಾಗಿದೆ.