ಹುಬ್ಬಳ್ಳಿ: ಡ್ರಗ್ಸ್ ಮುಕ್ತ ನಗರವಾಗಿಸಲು ಹುಬ್ಬಳ್ಳಿ-ಧಾರವಾಡ ಪೊಲೀಸರು ಪಣ ತೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಡ್ರಗ್ಸ ಮತ್ತು ಗಾಂಜಾ ಸರಬರಾಜು ಮಾಡುತ್ತಿದ್ದವರನ್ನು ಹೆಡೆಮುರಿ ಕಟ್ಟುತ್ತಿದ್ದಾರೆ. ಇದೀಗ ಹುಬ್ಬಳ್ಳಿಯಲ್ಲಿ ಗಾಂಜಾ ಪೂರೈಸುತ್ತಿದ್ದ 12 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಮಾತನಾಡಿ, ಈ ಹಿಂದೆ ಡ್ರಗ್ಸ್ ಕೇಸ್ನಲ್ಲಿ 70ಕ್ಕೂ ಹೆಚ್ಚು ಜನರನ್ನ ಬಂಧಿಸಲಾಗಿತ್ತು. ಮಾದಕ ವಸ್ತು ಎಲ್ಲಿಂದ ಬರುತ್ತೆ ಅನ್ನೋದರ ಬಗ್ಗೆ ತನಿಖೆಯಾಗುತ್ತಿದೆ ಎಂದು ಹೇಳಿದರು.
ಹುಬ್ಬಳ್ಳಿಯ ಕಿಮ್ಸ್ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ, ರಾಜಸ್ಥಾನದಿಂದ ಹುಬ್ಬಳ್ಳಿಗೆ ಹೆಚ್ಚು ಡ್ರಗ್ಸ್ ಬಂದಿದೆ. ಹುಬ್ಬಳ್ಳಿ-ಧಾರವಾಡ ಸಿಸಿಬಿ ಪೊಲೀಸರು ಗುರುವಾರ ಒಡಿಶಾ ಮೂಲದ ಇಬ್ಬರು ಆರೋಪಿಗಳು ಸೇರಿದಂತೆ 12 ಜನರನ್ನ ಬಂಧಿಸಿದ್ದಾರೆ. 2 ಕೆಜಿ 500 ಗ್ರಾಂ ಗಾಂಜಾ, ಡ್ಯಾಗರ್, ತಲ್ವಾರ್ ವಶಕ್ಕೆ ಪಡೆದಿದ್ದೇವೆ ಎಂದು ತಿಳಸಿದರು.