Ad imageAd image

ಸರ್ಕಾರದಿಂದ ನಿರುದ್ಯೋಗಿಗಳಿಗೆ ಬಂಪರ್ ಆಫರ್: ಬರ್ತಿದೆ ಯುವನಿಧಿ ಪ್ಲಸ್, ಭತ್ಯೆ ಜೊತೆ ಉದ್ಯೋಗ ​

ratnakar
By ratnakar
ಸರ್ಕಾರದಿಂದ ನಿರುದ್ಯೋಗಿಗಳಿಗೆ ಬಂಪರ್ ಆಫರ್: ಬರ್ತಿದೆ ಯುವನಿಧಿ ಪ್ಲಸ್, ಭತ್ಯೆ ಜೊತೆ ಉದ್ಯೋಗ ​
WhatsApp Group Join Now
Telegram Group Join Now

ಬೆಂಗಳೂರು: ಕರ್ನಾಟಕದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನ ಅನುಷ್ಠಾನ ಮಾಡಿರುವ ಕಾಂಗ್ರೆಸ್​ ಸರ್ಕಾರ ಈಗ ಮತ್ತೊಂದು ಭಾಗ್ಯ ನೀಡಲು ಮುಂದಾಗಿದೆ. ನಿರುದ್ಯೋಗ ಯುವಕರಿಗೆ ಕೌಶಲ್ಯ ಹಾಗೂ ಉದ್ಯೋಗ ನೀಡುವ ನಿಟ್ಟಿನಲ್ಲಿ ಪಂಚ ಯೋಜನೆಗಳ ಪೈಕಿ ಯುವನಿಧಿ ಪ್ಲಸ್  ಯೋಜನೆಯೊಂದನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಆ ಮೂಲಕ ನಿರುದ್ಯೋಗಳಿಗೆ ಭತ್ಯೆ ಜೊತೆ ಉದ್ಯೋಗ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

ಕಾಂಗ್ರೆಸ್ ಸರ್ಕಾರದ ಮಹತ್ವಾಕ್ಷಾಂಕಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯಲ್ಲಿ ನಿರುದ್ಯೋಗಿಗಳಿಗೆ ಪ್ರತಿ ತಿಂಗಳೂ 1500 ರೂ. ಹಾಗೂ ಪದವೀಧರರಿಗೆ 3000 ರೂ. ನೀಡುತ್ತಿದೆ. ಡಿಪ್ಲೊಮಾ ಇಲ್ಲವೇ ಪದವಿಯನ್ನು ಪೂರೈಸಿದ್ದು, ಇನ್ನೂ ಯಾವುದೇ ಉದ್ಯೋಗ ಸಿಗದವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿತ್ತು ಡಿಪ್ಲೋಮಾ ಹೋಲ್ಡರ್‌ಗಳಿಗೆ ಮುಂದಿನ ಎರಡು ವರ್ಷಗಳ ಕಾಲ ತಿಂಗಳಿಗೆ 1500 ರೂ. ಹಾಗೂ ಪದವೀಧರರಿಗೆ 3000 ರೂ. ನೀಡುವ ನಿರುದ್ಯೋಗ ಭತ್ಯೆ ನೀಡುವ ಯೋಜನೆ ಇದಾಗಿದೆ ಆದರೆ ಈಗ ಸರ್ಕಾರ ನಿರುದ್ಯೋಗಳಿಗೆ ಭತ್ಯಯ ಜೊತೆ ಉದ್ಯೋಗ ನೀಡುವ ಬಗ್ಗೆ ಚಿಂತನೆ ಮಾಡಿದ್ದು ಯುವನಿಧಿ ಪ್ಲಸ್​ ಜಾರಿಗೆ ಮುಂದಾಗಿದೆ.

ಯುವನಿಧಿ ಯೋಜನೆಯನ್ನ ಪರಿಷ್ಕರಣೆ ಮಾಡಿ ಯುವನಿಧಿ ಪ್ಲಸ್ ಮಾಡಲು ಸರ್ಕಾರ ಮುಂದಾಗಿದೆ. ನಿರುದ್ಯೋಗ ಯುವಕರಿಗೆ ಕೈಗಾರಿಕಾ ಕಂಪನಿ, ಐಟಿಬಿಟಿ , ಕಾರ್ಪೋರೇಟ್ ಕಂಪನಿಗಳ ಸಹಭಾಗಿತ್ವದಲ್ಲಿ ನಿರದ್ಯೋಗ ಯುವಕರಿಗೆ ತರಬೇತಿ ನೀಡಿ ಉದ್ಯೋಗ ದೊರಕುವಂತೆ ಮಾಡಲು ಸರ್ಕಾರ ಯುವನಿಧಿ ಪ್ಲಸ್​ ಯೋಜನೆ ಜಾರಿಗೆ ಮುಂದಾಗಿದೆ. ಸರ್ಕಾರದಿಂದ ಯುವನಿಧಿ ಯೋಜನೆಯ ಮುಂದುವರೆದ ಭಾಗವಾಗಿ ಯುವನಿಧಿ ಪಸ್ಲ್​ ಜಾರಿ ಮಾಡಲಾಗಿದ್ದು, ಈಗಾಗಲೇ ಯುವನಿಧಿ ಯೋಜನೆಯಡಿ ಪದವೀಧರರಿಗೆ ಮಾಸಿಕ 3 ಸಾವಿರ ರೂ. ಮತ್ತು ಡಿಪ್ಲೊಮಾ ಪದವೀಧರರಿಗೆ 1500 ರೂ. ನೀಡಲಾಗುತ್ತಿದೆ. ಇದರ ಮುಂದುವರೆದ ಭಾಗವಾಗಿ ಯುವನಿಧಿ ಪ್ಲಸ್​ ಜಾರಿ ಮಾಡಲಾಗುತ್ತಿದೆ.

ಈ ಯೋಜನೆಯಲ್ಲಿ ನಿರದ್ಯೋಗ ಯುವಕರಿಗೆ ಉದ್ಯೋಗ ನೀಡುವ ಹಾಗೂ ಕೌಶಲ್ಯ ತರಬೇತಿ ನೀಡಲು ಜೀವನೋಪಾಯ, ಕೌಶಲ್ಯಾಭಿವೃದ್ಧಿ ಇಲಾಖೆ ಮುಂದಾಗಿದೆ. ಯುವನಿಧಿಯಿಂದ ಹಣ ಮಾತ್ರ ನೀಡಲಾಗುತ್ತಿತ್ತು. ಕೆಲಸ ಸಿಗುತ್ತಿರಲಿಲ್ಲ ಹೀಗಾಗಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.

WhatsApp Group Join Now
Telegram Group Join Now
Share This Article