Ad imageAd image

ತುಂಗಭದ್ರಾ ಡ್ಯಾಂ ವಾರ್ಷಿಕ ನಿರ್ವಹಣಾ ಗುತ್ತಿಗೆಗೆ ಎಷ್ಟು ಕೋಟಿ ಹಣ ಸಂದಾಯವಾಗಿದೆ? – ಜನಾರ್ದನ ರೆಡ್ಡಿ ಪ್ರಶ್ನೆ

ratnakar
ತುಂಗಭದ್ರಾ ಡ್ಯಾಂ ವಾರ್ಷಿಕ ನಿರ್ವಹಣಾ ಗುತ್ತಿಗೆಗೆ ಎಷ್ಟು ಕೋಟಿ ಹಣ ಸಂದಾಯವಾಗಿದೆ? – ಜನಾರ್ದನ ರೆಡ್ಡಿ ಪ್ರಶ್ನೆ
WhatsApp Group Join Now
Telegram Group Join Now

ಕೊಪ್ಪಳ: ತುಂಗಭದ್ರಾ ಡ್ಯಾಂನ  ವಾರ್ಷಿಕ ನಿರ್ವಹಣಾ ಗುತ್ತಿಗೆದಾರರು ಯಾರು? ಅವರಿಗೆ ಎಷ್ಟು ಕೋಟಿ ಹಣ ಸಂದಾಯ ಆಗಿದೆ? ಅಂತ ಬಹಿರಂಗ ಪಡಿಸಬೇಕು ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ  ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ತುಂಗಭದ್ರಾ ಜಲಾಶಯದಲ್ಲಿ ಕಳಚಿಕೊಂಡ 19ನೇ ಕ್ರಸ್ಟ್‌ಗೇಟ್‌ ವೀಕ್ಷಣೆ ಮಾಡಿದ ಶಾಸಕ ಜನಾರ್ದನ ರೆಡ್ಡಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ತುಂಗಭದ್ರಾ ಜಲಾಶಯದ ನಿರ್ವಹಣೆಗೆ ಯಾರಿಗೆ ಕೊಟ್ಟಿದ್ದಾರೆ? ಇದಕ್ಕೆ ಎಲ್ಲಾ ಸರ್ಕರವೇ ಹೊಣೆ. ಡಿಕೆಶಿ ಅಚಾನಕ್ ಆಗಿದೆ ಅಂತ ಹೇಳ್ತಾರೆ, ಇದನ್ನ ಒಪ್ಪುವ ಪ್ರಶ್ನೆಯೇ ಬರಲ್ಲ ಅಂತ ಹೇಳಿದ್ದಾರೆ.

ತುಂಗಭದ್ರಾ ಡ್ಯಾಂ ವಿಚಾರದಲ್ಲಿ ನಾನು ಯಾರ ಮೇಲೂ ವೈಯಕ್ತಿಕ ಆರೋಪ ಮಾಡಲ್ಲ. ಆದ್ರೆ ಈ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯತನದ ವಿರುದ್ಧ ಸಿಬಿಐ ತನಿಖೆಯಾಗಬೇಕು. ಡ್ಯಾಂನ ವಾರ್ಷಿಕ ನಿರ್ವಹಣಾ ಗುತ್ತಿಗೆದಾರರು ಯಾರು? ಅವರಿಗೆ ಎಷ್ಟು ಕೋಟಿ ಹಣ ಸಂದಾಯ ಆಗಿದೆ? ಅಂತ ಸರ್ಕಾರ ಬಹಿರಂಗ ಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲದೇ ಗೇಟ್‌ ಅನ್ನು ನೀವು ಸರಿ ಮಾಡದಿದ್ದರೇ ಯಾರಾದ್ರೂ ಒಬ್ಬರು ಸರಿಪಡಿಸ್ತಾರೆ. ಆದ್ರೆ ಇದು ನಮ್ಮ ಭಾಗದ ರೈತರಿಗೆ ಆದ ದೊಡ್ಡ ಅನ್ಯಾಯ. ಸರ್ಕಾರ ಇದರ ಸಂಪೂರ್ಣ ಜವಾಬ್ದಾರಿ ಹೊರಬೇಕು, ನಿರ್ಲಕ್ಷತನ ತೋರಿದವರ ವಿರುದ್ಧ ಕ್ರಮ ಆಗಬೇಕು ಒತ್ತಾಯಿಸಿದ್ದಾರೆ.

ಬೇಸಿಗೆ ಕಾಲದಲ್ಲಿ ಡ್ಯಾಂ ಗೇಟ್‌ ಪರಿಶೀಲಿಸಿ, ನಿರ್ವಹಣೆ ಮಾಡಬೇಕು. ಸರ್ಕಾರ ಯಾವ ಕೆಲಸವನ್ನೂ ಮಾಡಿಲ್ಲ. ಹಳೇ ಡ್ಯಾಂಗಳ ನಿರ್ವಹಣೆಗೆ ಕೇಂದ್ರ ಸರ್ಕಾರ ತಂಡ ರಚನೆ ಮಾಡಿದೆ. ಅದನ್ನ ಇವರು ಸಂಪರ್ಕ ಮಾಡಿದ್ದಾರಾ? ಇದೆಲ್ಲವೂ ಮುಖ್ಯವಾಗುತ್ತೆ. ಇದಕ್ಕಾಗಿ ಸರ್ಕಾರ ಸಾಕಷ್ಟು ಹಣ ಖರ್ಚು ಮಾಡುತ್ತೆ? ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಇದ್ಯಾವುದೇ ನಿಯಮಗಳನ್ನ ಅನುಸರಿಸುತ್ತಿಲ್ಲ ಎಂದು ಆಕ್ಷೇಪಿಸಿದ್ದಾರೆ.

 

WhatsApp Group Join Now
Telegram Group Join Now
Share This Article