Ad imageAd image

ರಾಜ್ಯದಲ್ಲಿ ಆಗಸ್ಟ್ 17ರವರೆಗೆ ದಾಖಲೆಯ ಮಳೆ, ಎಲ್ಲೆಲ್ಲಿ ಎಷ್ಟೆಷ್ಟು ಉಷ್ಣಾಂಶ ಇಲ್ಲಿದೆ ಮಾಹಿತಿ

ratnakar
ರಾಜ್ಯದಲ್ಲಿ  ಆಗಸ್ಟ್ 17ರವರೆಗೆ ದಾಖಲೆಯ ಮಳೆ, ಎಲ್ಲೆಲ್ಲಿ ಎಷ್ಟೆಷ್ಟು ಉಷ್ಣಾಂಶ ಇಲ್ಲಿದೆ ಮಾಹಿತಿ
WhatsApp Group Join Now
Telegram Group Join Now

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ತುಮಕೂರು, ವಿಜಯನಗರ, ಕೊಡಗು, ಹಾನಸ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರಿನಲ್ಲೂ ಮಳೆಯಾಗಲಿದೆ.ಯಾದಗಿರಿ, ವಿಜಯಪುರ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಗದಗದಲ್ಲಿ ಒಣಹವೆ ಇರಲಿದ್ದು,ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮಂಗಳವಾರ ಬೆಳಗಿನ ಜಾವ ಮಳೆಯಾಗಿದೆ, ಎಚ್​ಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

WhatsApp Group Join Now
Telegram Group Join Now
Share This Article