Ad imageAd image
- Advertisement - 

ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು – ಇಂದು ಕೋರ್ಟ್‌ನಲ್ಲಿ ಭವಿಷ್ಯ!

ratnakar
ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು – ಇಂದು ಕೋರ್ಟ್‌ನಲ್ಲಿ ಭವಿಷ್ಯ!
WhatsApp Group Join Now
Telegram Group Join Now

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ  ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತ ಆದೇಶವನ್ನು ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ  ಪ್ರಕಟಿಸಲಿದೆ.

ನ್ಯಾಯಾಲಯದ ಈ ಆದೇಶ ಆಧರಿಸಿ ಸಿದ್ದರಾಮಯ್ಯ ಅವರು ವಿಚಾರಣೆ ಎದುರಿಸಲಿದ್ದಾರೆಯೇ ಎಂಬುದು ಗೊತ್ತಾಗಲಿದೆ. ಕೋರ್ಟ್‌ ನೀಡುವ ಆದೇಶ ನೋಡಿಕೊಂಡು ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ನೀಡಿರುವ ದೂರನ್ನು ಅಭಿಯೋಜನೆಗೆ ಅನುಮತಿ ಪರಿಗಣಿಸಿ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ರಾಜ್ಯಪಾಲರು ನಿರ್ಧರಿಸುವ ಸಾಧ್ಯತೆಯಿದೆ. ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದತ್ತ ಎಲ್ಲರ ಚಿತ್ರ ಇದೆ.

ಐದು ದಿನಗಳ ಹಿಂದೆಯಷ್ಟೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಮ್ಮ, ಮಲ್ಲಿಕಾರ್ಜುನ , ನಿಂಗಾ (ಜವರ) ಮತ್ತು ಇನ್ನಿತರರ ವಿರುದ್ಧ ದೂರು ದಾಖಲಾಗಿದೆ.

ದೂರುದಾರರ ಪರವಾಗಿ ವಕೀಲರಾದ ಲಕ್ಷ್ಮಿ ಐಯ್ಯಂಗಾರ್ ಅವರು ವಾದ ಮಂಡಿಸಿದ್ದರು. ಮುಡಾ ಹಗರಣದ ವಿಚಾರದಲ್ಲಿ ತಕ್ಷಣಕ್ಕೆ ಅಭಿಯೋಜನೆಯ ಅಗತ್ಯ ಇಲ್ಲ. ಅದಿಲ್ಲದೆಯೇ ಪ್ರಕರಣವನ್ನ ವಿಚಾರಣೆಗೊಳಪಡಿಸಬಹುದು ಎಂದು ವಾದ ಮಂಡಿಸಿ, ಅಯ್ಯಪ್ಪ ಮತ್ತು ಮಂಜು ಸುರಾನಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಆದೇಶವನ್ನು ಉಲ್ಲೇಖಿಸಿದರು.

 

WhatsApp Group Join Now
Telegram Group Join Now
Share This Article